HomeLatest NewsBREAKING: ರಾಜ್ಯ ಕಾಂಗ್ರೆಸ್ ನಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ: ಸಿಎಂ, ಡಿಸಿಎಂ ಬೆನ್ನಲ್ಲೇ ಸಚಿವ ಸತೀಶ್...

BREAKING: ರಾಜ್ಯ ಕಾಂಗ್ರೆಸ್ ನಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ: ಸಿಎಂ, ಡಿಸಿಎಂ ಬೆನ್ನಲ್ಲೇ ಸಚಿವ ಸತೀಶ್ ಜಾರಕಿಹೊಳಿಗೂ ಹೈಕಮಾಂಡ್ ಬುಲಾವ್!

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಆಂತರಿಕ ಬೆಳವಣಿಗೆಗಳು ಚುರುಕುಗೊಂಡಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಹೈಕಮಾಂಡ್ ಕರೆ ನೀಡಿರುವ ಬೆನ್ನಲೇ ಸಚಿವ ಸತೀಶ್ ಜಾರಕಿಹೊಳಿಗೂ ಹೈಕಮಾಂಡ್ ನಾಯಕರು ಬುಲಾವ್ ನೀಡಿದ್ದಾರೆ.

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭೀಕರ ಕಾಲ್ತುಳಿತ ಸಂಭವಿಸಿ ಆರ್ ಸಿಬಿಯ 11 ಅಭಿಮಾನಿಗಳು ಸಾವನ್ನಪ್ಪಿದ ಘಟನೆ ಬಗ್ಗೆ ರಾಷ್ಟ್ರ ಮಟ್ಟದಲ್ಲಿ ಚರ್ಚೆಯಾಗುತ್ತಿದ್ದು, ವಿಪಕ್ಷ ಬಿಜೆಪಿ, ಜೆಡಿಎಸ್ ನಾಯಕರು ಸಿಎಂ, ಡಿಸಿಎಂ, ಗೃಹ ಸಚಿವರು ರಾಜೀನಾಮೆ ಕೊಡಬೇಕು ಎಂದು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಬೆಳವಣಿಗೆ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ನಾಯಕರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಬುಲಾವ್ ನೀಡಿದ್ದು, ಇಂದು ಇಬ್ಬರು ನಾಯಕರು ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ವರಿಷ್ಠರನ್ನು ಭೇಟಿಯಾಗಿ ಚರ್ಚಿಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ನಡುವೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಗೂ ಹೈಕಮಾಂಡ್ ಕರೆ ನೀಡಿದ್ದು, ಸತೀಶ್ ಜಾರಕಿಹೊಳಿ ಕೂಡ ದೆಹಲಿಗೆ ಪ್ರಯಾಣ ಬೆಳೆಸಿರುವುದು ಕುತೂಹಲ ಮೂಡಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular