ಬೆಂಗಳೂರು : ಕರ್ನಾಟಕವನ್ನು ಕಾಂಗ್ರೆಸ್ ಮಿನಿ ಪಾಕಿಸ್ತಾನ ಮಾಡಲು ಹೊರಟಿದೆ ಎಂದು ಮಾಜಿ ಸಚಿವ ಆರ್ ಅಶೋಕ್ ವಾಗ್ಧಾಳಿ ನಡೆಸಿದ್ದಾರೆ.
ಇಂದು ಸುದ್ದಿಗಾರರ ಜೊತೆ ಮಾತನಾಡಿದ ಆರ್ ಅಶೋಕ್ ‘ ಮತಾಂತರ ನಿಷೇಧ ಕಾಯಿದೆ ರದ್ದು ಮಾಡಲು ನಿರ್ಧರಿಸಿದ ರಾಜ್ಯ ಸರ್ಕಾರದ ತೀರ್ಮಾನಕ್ಕೆ ಕಿಡಿಕಾರಿದ್ದಾರೆ.
ಕಾಂಗ್ರೆಸ್ ಟಿಪ್ಪು ಸಿದ್ದಾಂತಗಳಿಗೆ ಪೂರಕವಾಗಿದೆ, ಕರ್ನಾಟಕವನ್ನು ಕಾಂಗ್ರೆಸ್ ಮಿನಿ ಪಾಕಿಸ್ತಾನ ಮಾಡಲು ಹೊರಟಿದೆ. ರಾಜ್ಯದಲ್ಲಿ 30-40 ಹಿಂದೂಗಳು ಮತಾಂತರವಾಗಿದ್ದಾರೆ, ಮತಾಂತರ ನಿಷೇಧ ಕಾಯಿದೆ ವಾಪಸ್ ಪಡೆಯಬಾರದು.ಎಂದು ಮಾಜಿ ಸಚಿವ ಆರ್ ಅಶೋಕ್ ವಾಗ್ಧಾಳಿ ನಡೆಸಿದ್ದಾರೆ. ಎಪಿಎಂಸಿ ಕಾಯ್ದೆ ಜಾರಿ ಮಾಡಿರುವುದರಲ್ಲಿ ಏನು ತಪ್ಪಿದೆ..? ಇದನ್ನು ಕೂಡ ಕಾಂಗ್ರೆಸ್ ರದ್ದು ಮಾಡಲು ಹೊರಟಿದೆ ಎಂದು ಅಶೋಕ್ ಕಿಡಿಕಾರಿದ್ದಾರೆ.
ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರ ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ತಂದಿದ್ದ ಹಲವು ಕಾಯ್ದೆಗಳಿಗೆ ಕೊಕ್ ನೀಡಲು ಮುಂದಾಗಿದೆ. ಇದಕ್ಕೆ ಬಿಜೆಪಿ ನಾಯಕರು ಕಿಡಿಕಾರುತ್ತಿದ್ದಾರೆ.
TAGGED:R.Ashok