HomeKarnatakaBREAKING: ನಿರೀಕ್ಷೆಯಂತೆ ಜಗದೀಶ್ ಶೆಟ್ಟರ್ ಗೆ ಕಾಂಗ್ರೆಸ್ MLC ಟಿಕೆಟ್

BREAKING: ನಿರೀಕ್ಷೆಯಂತೆ ಜಗದೀಶ್ ಶೆಟ್ಟರ್ ಗೆ ಕಾಂಗ್ರೆಸ್ MLC ಟಿಕೆಟ್

ಈ ಬಾರಿಯ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡು ಹುಬ್ಬಳ್ಳಿ – ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಈ ಚುನಾವಣೆಯಲ್ಲಿ ಪರಾಭವಗೊಂಡರೂ ಸಹ ಜೂನ್ 30 ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಪಡೆದುಕೊಂಡಿದ್ದಾರೆ.

ಜೂನ್ 30ರಂದು ವಿಧಾನ ಪರಿಷತ್ತಿನ ಮೂರು ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು, ಜಗದೀಶ್ ಶೆಟ್ಟರ್, ತಿಪ್ಪಣ್ಣಪ್ಪ ಕಮಕನೂರು ಹಾಗೂ ಎನ್ ಎಸ್ ಬೋಸರಾಜು ಅವಕಾಶ ಪಡೆದುಕೊಂಡಿದ್ದಾರೆ. ಸಂಖ್ಯಾಬಲದ ಆಧಾರದಲ್ಲಿ ಈ ಮೂರೂ ಸ್ಥಾನಗಳನ್ನು ಕಾಂಗ್ರೆಸ್ ನಿರಾಯಸವಾಗಿ ಪಡೆದುಕೊಳ್ಳಲಿದೆ ಎಂದು ಹೇಳಲಾಗಿದೆ.

ಮುಂದಿನ ವರ್ಷ ಲೋಕಸಭಾ ಚುನಾವಣೆ ನಡೆಯಲಿದ್ದು, ಉತ್ತರ ಕರ್ನಾಟಕದ ಪ್ರಭಾವಿ ಲಿಂಗಾಯತ ನಾಯಕರಾದ ಜಗದೀಶ್ ಶೆಟ್ಟರ್ ಅವರಿಗೆ ವಿಧಾನ ಪರಿಷತ್ ಸದಸ್ಯತ್ವ ಕಲ್ಪಿಸಿಕೊಡುವ ಮೂಲಕ ಕಾಂಗ್ರೆಸ್ ಈಗಿನಿಂದಲೇ ಚುನಾವಣೆಗೆ ತಯಾರಿ ನಡೆಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular