HomeKarnatakaಆಯನೂರು ಮಂಜುನಾಥ್, ನಾಗರಾಜ ಗೌಡ ಸೇರಿ ಹಲವರು ಇಂದು ಕಾಂಗ್ರೆಸ್ ಸೇರ್ಪಡೆ

ಆಯನೂರು ಮಂಜುನಾಥ್, ನಾಗರಾಜ ಗೌಡ ಸೇರಿ ಹಲವರು ಇಂದು ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ಮಾಜಿ ಸಂಸದ ಆಯನೂರು ಮಂಜುನಾಥ್ ಸೇರಿದಂತೆ ಹಲವರು ಇಂದು ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.

ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಸೇರಲು ಪ್ರಯತ್ನಿಸಿ ವಿಫಲರಾಗಿದ್ದ ಆಯನೂರು ಮಂಜುನಾಥ್ ಶಿವಮೊಗ್ಗ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದಿಂದ ಸ್ಪರ್ಧಿಸಿದ್ದರು. ರಾಜ್ಯಸಭೆ, ಲೋಕಸಭೆ, ವಿಧಾನಸಭೆ, ವಿಧಾನಪರಿಷತ್ ಹೀಗೆ ನಾಲ್ಕು ಸದನಗಳನ್ನು ಪ್ರತಿನಿಧಿಸಿರುವ ಆಯನೂರು ಮಂಜುನಾಥ್ ಇಂದು ಕಾಂಗ್ರೆಸ್ ಸೇರಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಿಕಾರಿಪುರದಲ್ಲಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನಾಗರಾಜ ಗೌಡ ಸೇರಿದಂತೆ ಹಲವು ಮುಖಂಡರು ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular