HomeKarnatakaಪ್ರತಿಪಕ್ಷಗಳಿಂದ ಕಾಂಗ್ರೆಸ್ ಗೆ ಇನ್ನಷ್ಟು ಶಾಸಕರ ಸೇರ್ಪಡೆ: ಸುಳಿವು ನೀಡಿದ ಡಿಸಿಎಂ ಡಿಕೆ

ಪ್ರತಿಪಕ್ಷಗಳಿಂದ ಕಾಂಗ್ರೆಸ್ ಗೆ ಇನ್ನಷ್ಟು ಶಾಸಕರ ಸೇರ್ಪಡೆ: ಸುಳಿವು ನೀಡಿದ ಡಿಸಿಎಂ ಡಿಕೆ

ಗದಗ: ನಮ್ಮ ಸರ್ಕಾರಕ್ಕೆ 140 ಶಾಸಕರ ಬೆಂಬಲವಿದ್ದು, ಈಗಾಗಲೇ ಇಬ್ಬರು ಬಂದಿದ್ದಾರೆ, ಉಳಿದವರು ನಮ್ಮೊಂದಿಗೆ ಇದ್ದಾರೆ. ಅದನ್ನು ಇಲ್ಲಿ ಹೇಳುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಈ ಮೂಲಕ ಪರೋಕ್ಷವಾಗಿ ಪ್ರತಿಪಕ್ಷದ ಇನ್ನಷ್ಟು ಮಂದಿ ಶಾಸಕರು ಕಾಂಗ್ರೆಸ್ ಗೆ ಸೇರ್ಪಡೆಯಾಗುವ ಸುಳಿವು ನೀಡಿದ್ದಾರೆ. ರೋಣ ಪಟ್ಟಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಕಾರ್ಯಕ್ರಮದಲ್ಲಿ ಮಾತನಾಡಿದವರು.

ಇತ್ತೀಚಿಗೆ ನಡೆದ ಉಪಚುನಾವಣೆಯಲ್ಲಿ ಇಬ್ಬರು ಮುಖ್ಯಮಂತ್ರಿಗಳ ಮಕ್ಕಳಿಗೆ ಜನ ರೆಸ್ಟ್ ನೀಡಿದ್ದಾರೆ. ಇಬ್ಬರು ಶಾಸಕರು ಈಗಾಗಲೇ ನಮ್ಮೊಂದಿಗೆ ಇದ್ದು ನಮ್ಮ ಸರ್ಕಾರಕ್ಕೆ 140 ಶಾಸಕರ ಬೆಂಬಲವಿದೆ. ಇನ್ನುಳಿದವರು ನಮ್ಮೊಂದಿಗೆ ಇದ್ದಾರೆ. ಅದನ್ನು ಈಗ ಹೇಳುವುದಿಲ್ಲ ಎಂದು ಡಿಸಿಎಂ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular