ಕಾಂಗ್ರೆಸ್ ಗೆ ಮರಳಿದ ಮುದ್ದಹನುಮೇಗೌಡ ತುಮಕೂರಿನಿಂದ ಕಣಕ್ಕೆ ಸಾಧ್ಯತೆ

ಬೆಂಗಳೂರು: ಮಾಜಿ ಸಂಸದ ಮುದ್ದಹನುಮೇಗೌಡ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಸಚಿವರಾದ ಜಿ. ಪರಮೇಶ್ವರ್, ಕೆ.ಎನ್. ರಾಜಣ್ಣ ಅವರ ಸಮ್ಮುಖದಲ್ಲಿ ಮುದ್ದಹನುಮೇಗೌಡ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಅವರು ತುಮಕೂರು ಕ್ಷೇತ್ರದಿಂದ ಅವರು ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ.

ಮುದ್ದಹಮುಮೇಗೌಡ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದ ಸಿಎಂ ಸಿದ್ಧರಾಮಯ್ಯ, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಕನಿಷ್ಠ 20 ಸ್ಥಾನಗಳನ್ನು ಈ ಬಾರಿ ಗೆದ್ದೇ ಗೆಲ್ಲುತ್ತದೆ. ಯಾರು ಏನೇ ಹೇಳಿದರೂ ನಾವು ನೂರಕ್ಕೆ ನೂರು ಗೆಲ್ಲುತ್ತೇವೆ. ಒಗ್ಗಟ್ಟಿನಿಂದ ಸಣ್ಣ ಪುಟ್ಟ ಭಿನ್ನಾಭಿಪ್ರಾಯಗಳಿದ್ದರೆ ಅದನ್ನು ಮರೆತು ಗೆಲ್ಲಲೇಬೇಕು ಎಂಬ ಛಲದಿಂದ ಎಲ್ಲರೂ ಕೆಲಸ ಮಾಡಬೇಕು ಎಂದು ಹೇಳಿದ್ದಾರೆ.

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯವರು ಯಾರನ್ನು ಸೂಚಿಸುತ್ತಾರೋ ಅವರನ್ನೇ ಅಭ್ಯರ್ಥಿ ಮಾಡುತ್ತೇವೆ. ತುಮಕೂರು ಜಿಲ್ಲೆಯಲ್ಲಿ ಗೆಲ್ಲಲು ಅವಕಾಶವಿದೆ. ಒಳ್ಳೆಯ ವಾತಾವರಣವಿದೆ. ಸರ್ಕಾರ ಕೂಡ ಜನಪರವಾದ ಕೆಲಸಗಳನ್ನು ಮಾಡಿದೆ. ಐದು ಗ್ಯಾರಂಟಿಗಳನ್ನು ಜಾರಿ ಮಾಡಿ, ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ. ಆದ್ದರಿಂದ ಇಡೀ ರಾಜ್ಯದಲ್ಲಿ ಒಳ್ಳೆಯ ವಾತಾವರಣವಿದೆ ಎಂದು ಹೇಳಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read