ಡ್ರಗ್ಸ್ ಮಾರಾಟಗಾರರ ಮನೆಗಳ ಮೇಲೆ ಬುಲ್ಡೋಜರ್ ಬಳಸಬಹುದು ಎನ್ನುವ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿಕೆಗೆ ಕೇಂದ್ರದ ಮಾಜಿ ಸಚಿವ ಮತ್ತು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಪಿ. ಚಿದಂಬರಂ ವಿರೋಧ ವ್ಯಕ್ತಪಡಿಸಿದ್ದಾರೆ.
ಮನೆಗಳ ತೆರವಿಗೆ ಬುಲ್ಡೋಜರ್ ಬಳಸಬಹುದು ಎಂಬ ವರದಿಯಿಂದ ಆತಂಕ ಉಂಟಾಗಿದೆ. ಇದು ತಪ್ಪು ಎಂದು ನಾನು ಭಾವಿಸುತ್ತೇನೆ ಎಂದು ಚಿದಂಬರಂ ಟ್ವೀಟ್ ಮಾಡಿದ್ದಾರೆ. ಕಾನೂನಿನ ಪ್ರಕ್ರಿಯೆ ಇಲ್ಲದೆ ಮನೆಗಳನ್ನು ಕೆಡುವುವುದು ಕಾನೂನು ಬಾಹಿರ. ಕುಟುಂಬದ ಇತರ ಸದಸ್ಯರ ಮೂಲಭೂತ ಹಕ್ಕು ಮತ್ತು ಮಾನವ ಹಕ್ಕುಗಳ ಉಲ್ಲಂಘನೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಉತ್ತರಪ್ರದೇಶದಲ್ಲಿ ಬಳಕೆಯಾಗುತ್ತಿರುವ ಬುಲ್ಡೋಜರ್ ನ್ಯಾಯ ತಪ್ಪು, ಕಾನೂನುಬಾಹಿರ ಅನ್ಯಾಯ ಎಂಬುದು ಕಾಂಗ್ರೆಸ್ ದೃಷ್ಟಿಕೋನವಾಗಿದೆ. ಕರ್ನಾಟಕದಲ್ಲಿರುವ ಕಾಂಗ್ರೆಸ್ ಆಡಳಿತಕ್ಕೆ ಉತ್ತರ ಪ್ರದೇಶದ ದಾರಿ ಬೇಡ ಎಂದು ಚಿದಂಬರಂ ಹೇಳಿದ್ದಾರೆ.
I am alarmed by the reported statement of Karnataka's Home Minister that bulldozers may be used to demolish the homes of drug peddlers
— P. Chidambaram (@PChidambaram_IN) December 12, 2025
I hope the report is wrong
The SC has declared the law: demolishing homes without due process of law is illegal and will violate the…
