HomeLatest NewsBIG NEWS: ಕಾಂಗ್ರೆಸ್ ಮುಖಂಡನ ಹತ್ಯೆ ಪ್ರಕರಣ: ಆರೋಪಿ ಕಾಲಿಗೆ ಪೊಲೀಸ್ ಗುಂಡೇಟು

BIG NEWS: ಕಾಂಗ್ರೆಸ್ ಮುಖಂಡನ ಹತ್ಯೆ ಪ್ರಕರಣ: ಆರೋಪಿ ಕಾಲಿಗೆ ಪೊಲೀಸ್ ಗುಂಡೇಟು

ರಾಮನಗರ: ಕಾಂಗ್ರೆಸ್ ಮುಖಂಡ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ನಂಜೇಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕಾಲಿಗೆ ಗುಂಡೇಟು ಹೊಡೆದು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಆರೋಪಿ ಶ್ರೀನಿವಾಸ್ ಕಾಲಿಗೆ ಕನಕಪುರ ಟೌನ್ ಇನ್ಸ್ ಪೆಕ್ಟರ್ ಅನಂತರಾಮು ನೇತೃತ್ವದ ತಂಡ ಗುಂಡೇಟು ಹೊಡೆದು ಬಂಧಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಾತನೂರು ಆರ್.ಕೆ.ಡಾಬಾ ಬಳಿ ಕಾಂಗ್ರೆಸ್ ಮುಖಂಡ ನಂಜೇಶ್ ಅವರನ್ನು ಶ್ರೀನಿವಾಸ್ ಹಾಗೂ ದುಷ್ಕರ್ಮಿಗಳ ತಂಡ ಬಂಧಿಸಿತ್ತು. ಬಳಿಕ ಆರೋಪಿ ಶ್ರೀನಿವಾಸ್ ಗಬ್ಬಾಡಿ ಎಂಬಲ್ಲಿ ತಲೆಮರೆಸಿಕೊಂಡಿದ್ದ. ಖಚಿತ ಮಾಹಿತಿ ಮೇರೆಗೆ ಪೊಲೀಸರು ಇಂದು ಬೆಳಿಗ್ಗೆ ದಾಳಿ ನಡೆಸಿದ್ದಾರೆ. ಈ ವೇಳೆ ಆರೋಪಿ ಶ್ರೀನಿವಾಸ್ ಕಾನ್ಸ್ಟೇಬಲ್ ರಮೇಶ್ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ. ಎಚ್ಚರಿಕೆ ನೀಡಿದರೂ ತಪ್ಪಿಸಿಕೊಳ್ಳಲು ಮುಂದಾದ ಹಿನ್ನೆಲೆಯಲ್ಲಿ ಇನ್ಸ್ ಪೆಕ್ಟರ್ ಅನಂತರಾಜು ಆರೋಪಿ ಕಾಲಿಗೆ ಗುಂಡೇಟು ಹೊಡೆದಿದ್ದಾರೆ. ಬಳಿಕ ಆರೋಪಿಯನ್ನು ಬಂಧಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular