BREAKING NEWS: ಕೊಲೆ ಆರೋಪಿಗಳ ಸಂಬಂಧಿಕರ ಮನೆ ಮೇಲೆ ಕಲ್ಲು ತೂರಾಟ; ಬೈರಗಾನಹಳ್ಳಿ ಉದ್ವಿಗ್ನ

ಚಿಕ್ಕಬಳ್ಳಾಪುರ: ಕಾಂಗ್ರೆಸ್ ಮುಖಂಡ ನಾರಾಯಣಸ್ವಾಮಿ ಎಂಬುವವರ ಕಾರನ್ನು ಅಡ್ಡಗಟ್ಟಿ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಬೈರಗಾನಹಳ್ಳಿಯಲ್ಲಿ ನಡೆದಿತ್ತು. ಘಟನೆ ಬೆನ್ನಲ್ಲೇ ಬೈರಗಾನಹಳ್ಳಿಯಲ್ಲಿ ಗುಂಪು ಘರ್ಷಣೆ, ಕಲ್ಲುತೂರಾಟ ಪ್ರಕರಣಗಳು ನಡೆಯುತ್ತಿದ್ದು, ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿಯುಂಟಾಗಿದೆ.

ಹತ್ಯೆ ಪ್ರಕರಣ ಸಂಬಂಧ ಈಗಾಗಲೇ ಶಿಡ್ಲಘಟ್ಟ ಪೊಲೀಸರು ಪ್ರಮೋದ್ ಹಾಗೂ ವೇಣು ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಕಾಂಗ್ರೆಸ್ ಮುಖಂಡನ ಹತ್ಯೆ ಖಂಡಿಸಿ ಆರೋಪಿಗಳ ಸಂಬಂಧಿಕರ ಮನೆಯ ಮೇಲೆ ಗ್ರಾಮಸ್ಥರು ಕಲ್ಲುತೂರಾಟ ನಡೆಸಿದ್ದಾರೆ.

ಮನೆಯ ಗಾಜುಗಳನ್ನು ಪುಡಿ ಪುಡಿ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದು, ಗ್ರಾಮದಲ್ಲಿ ಪರಿಸ್ಥಿತಿ ಬೂದಿಮುಚ್ಚಿದ ಕೆಂಡದಂತಿದೆ.

ಎಎಸ್ ಪಿ ಕುಶಾಲ್ ಚೌಕ್ಸಿ ನೇತೃತ್ವದಲ್ಲಿ ಗ್ರಾಮದಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read