HomeKarnatakaಕಿವಿ ಮೇಲೆ ಹೂವಿಟ್ಟುಕೊಂಡು ಸದನಕ್ಕೆ ಬಂದ ಸಿದ್ದರಾಮಯ್ಯ...!

ಕಿವಿ ಮೇಲೆ ಹೂವಿಟ್ಟುಕೊಂಡು ಸದನಕ್ಕೆ ಬಂದ ಸಿದ್ದರಾಮಯ್ಯ…!

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ತಮ್ಮ ಸರ್ಕಾರದ ಕೊನೆಯ ಬಜೆಟ್ ಮಂಡನೆ ಮಾಡುತ್ತಿದ್ದು, ಮಾಜಿ ಮುಖ್ಯಮಂತ್ರಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಈ ಸಂದರ್ಭದಲ್ಲಿ ಕಿವಿ ಮೇಲೆ ಹೂವಿಟ್ಟುಕೊಂಡು ಸದನಕ್ಕೆ ಬಂದಿದ್ದಾರೆ.

ಕಿವಿ ಮೇಲೆ ಹೂವು ಏಕೆ ಇಟ್ಟುಕೊಂಡು ಬಂದಿದ್ದೀರಿ ಎಂಬ ಪ್ರಶ್ನೆಗೆ ಉತ್ತರಿಸಿರುವ ಸಿದ್ದರಾಮಯ್ಯನವರು, ಈ ಸರ್ಕಾರ ಬಜೆಟ್ ಮಂಡನೆ ಮೂಲಕ ರಾಜ್ಯದ ಜನತೆಯ ಕಿವಿಗೆ ಹೂವು ಇಡಲು ಹೊರಟಿದೆ. ಅದನ್ನು ಸಾಂಕೇತಿಕವಾಗಿ ಬಿಂಬಿಸಲು ಈ ರೀತಿ ಮಾಡಿದ್ದೇನೆ ಎಂದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದಕ್ಕೆ ಪ್ರತಿಕ್ರಿಯಿಸಿದ ಬಸವರಾಜ ಬೊಮ್ಮಾಯಿ, ಅವರು ಹೂವಿಟ್ಟುಕೊಂಡ ಬಂದಿರುವುದು ನನಗೆ ಸರಿ ಕಾಣಿಸುತ್ತಿಲ್ಲ. ಆದರೆ ಅದು ಅವರ ಇಷ್ಟ. ಈವರೆಗೆ ಅವರು ಜನರ ಕಿವಿಗೆ ಹೂವು ಇಡುತ್ತಿದ್ದರು. ಮುಂಬರುವ ಚುನಾವಣೆಯಲ್ಲಿ ಜನ ಅವರ ಕಿವಿಗೆ ಹೂವು ಇಡಲಿದ್ದಾರೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular