HomeLatest Newsಮಹಿಳಾ ಅಧಿಕಾರಿಗೆ ಅಶ್ಲೀಲವಾಗಿ ನಿಂದಿಸಿ ಕಾಂಗ್ರೆಸ್ ಮುಖಂಡನಿಂದ ಧಮ್ಕಿ  : ಆಡಿಯೋ ವೈರಲ್ |WATCH VIDEO

ಮಹಿಳಾ ಅಧಿಕಾರಿಗೆ ಅಶ್ಲೀಲವಾಗಿ ನಿಂದಿಸಿ ಕಾಂಗ್ರೆಸ್ ಮುಖಂಡನಿಂದ ಧಮ್ಕಿ  : ಆಡಿಯೋ ವೈರಲ್ |WATCH VIDEO

ಚಿಕ್ಕಬಳ್ಳಾಪುರ  : ಓರ್ವ ಸರ್ಕಾರಿ ಮಹಿಳಾ ಅಧಿಕಾರಿಗೆ  (ಶಿಡ್ಲಘಟ್ಟ  ನಗರಸಭೆ ಪೌರಾಯುಕ್ತೆ) ಗೆ ಕಾಂಗ್ರೆಸ್ ಮುಖಂಡನೋರ್ವ ಅಶ್ಲೀಲವಾಗಿ ನಿಂದಿಸಿ ಧಮ್ಕಿ ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಸಾರ್ವಜನಿಕ ವಲಯದಲ್ಲಿ ಭಾರಿ ಟೀಕೆ , ಆಕ್ರೋಶಕ್ಕೆ ಕಾರಣವಾಗಿದೆ.  

ಕಲ್ಟ್ ಚಿತ್ರದ ಬ್ಯಾನರ್ ತೆರವುಗೊಳಿಸಿದ್ದಕ್ಕೆ  ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಗೌಡಗೆ ಕರೆ ಮಾಡಿದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅಶ್ಲೀಲವಾಗಿ ನಿಂದಿಸಿ, ಜೀವ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಬೆದರಿಕೆ ಹಾಕಿದ್ದಕ್ಕೆ ಅಮೃತಾ ಗೌಡ ಕಣ್ಣೀರಿಟ್ಟಿದ್ದಾರೆ.  ಅನಧಿಕೃತವಾಗಿ ಹಾಕಿದ್ದ ಬ್ಯಾನರ್ ಅನ್ನು ತೆರವು ಮಾಡಿದ್ದಕ್ಕೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಕಾಂಗ್ರೆಸ್ ನಾಯಕ ರಾಜೀವ್ ಗೌಡ ಕರೆ ಮಾಡಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಈ ಕುರಿತಾದ ಆಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಜೆಡಿಎಸ್ ಆಕ್ರೋಶ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

@INCKarnatakaದುರಾಡಳಿತದಲ್ಲಿ ಕಾಂಗ್ರೆಸ್‌ ಮುಖಂಡರ ಗೂಂಡಾಗಿರಿ ಜೋರಾಗಿದೆ. ಸಚಿವ @BZZameerAhmedKಪುತ್ರ ಝೈದ್ ಖಾನ್ ಸಿನಿಮಾದ ಪ್ಲೆಕ್ಸ್‌ʼಗಳನ್ನು ತೆರವುಗೊಳಿಸಿದ್ದಕ್ಕೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಕಾಂಗ್ರೆಸ್‌ ಮುಖಂಡ ರಾಜೀವ್ ಗೌಡ ಅವಾಚ್ಯವಾಗಿ, ಅಶ್ಲೀಲ ಶಬ್ದಗಳಿಂದ ನಿಂದಿಸಿ ಪ್ರಾಣ ಬೆದರಿಕೆ ಹಾಕಿದ್ದಾನೆ. ಶಿಡ್ಲಘಟ್ಟದ ಕೋಟೆ ಸರ್ಕಲ್‌ ರಸ್ತೆಗಳಲ್ಲಿ ಅನುಮತಿ ಪಡೆಯದೆ, ಅಕ್ರಮವಾಗಿ ಫ್ಲೆಕ್ಸ್‌ ಬ್ಯಾನರ್‌ ಅಳವಡಿಸಿದ್ದಕ್ಕೆ, ಪೌರಾಯುಕ್ತೆ ಅಮೃತಗೌಡ ಅವರು, ರಸ್ತೆಯಲ್ಲಿ ಅಪಘಾತ ಹೆಚ್ಚಿದ್ದು, ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಬ್ಯಾನರ್‌ಗಳನ್ನು ತೆರವುಗೊಳಿಸಿದ್ದಾರೆ. ಇದಕ್ಕೆ ಕಾಂಗ್ರೆಸ್‌ ಮುಖಂಡ ದೂರವಾಣಿ ಕರೆ ಮಾಡಿ, ಬ್ಯಾನರ್‌ ತೆಗೆಸಿದವರನ್ನು ‘ಬೆಂಕಿ ಹಾಕಿ ಸುಟ್ಟು ಹಾಕುತ್ತೇನೆ, ಚಪ್ಪಲಿಯಲ್ಲಿ ಹೊಡೆಸುತ್ತೇನೆ, ಕಾರ್ಯಕರ್ತರನ್ನು ಕರೆಸಿ ದಂಗೆ ಎಬ್ಬಿಸುತ್ತೇನೆ ಎಂದು ಮಹಿಳಾಧಿಕಾರಿಗೆ ಅಶ್ಲೀಲವಾಗಿ ನಿಂದಿಸಿ ಬೆದರಿಕೆಯೊಡ್ಡಿದ್ದಾನೆ. ಸಿಎಂ @siddaramaiahಗೃಹ ಸಚಿವರ @DrParameshwara ಅವರೇ ಪೌರಾಯುಕ್ತೆಗೆ ಧಮ್ಕಿ ಹಾಗೂ ಜೀವ ಬೆದರಿಕೆ ಹಾಕಿರುವ ಕಾಂಗ್ರೆಸ್‌ ಗೂಂಡಾ ರಾಜೀವ್‌ ಗೌಡನನ್ನು ತಕ್ಷಣವೇ ಬಂಧಿಸಿ, ಕಾನೂನು ಕ್ರಮ ಜರುಗಿಸಿ. ಕಾಂಗ್ರೆಸ್‌ ಅಧ್ಯಕ್ಷ @DKShivakumarಅವರೇ, #KPCC ರಾಜ್ಯ ಸಂಯೋಜಕನಾಗಿರುವ ಬೀದಿ ರೌಡಿ ರಾಜೀವ್‌ ಗೌಡನನ್ನು ಮೊದಲು ಪಕ್ಷದಿಂದ ವಜಾ ಮಾಡಿ ಎಂದು ಜೆಡಿಎಸ್ ಕಿಡಿಕಾರಿದೆ.

ಬಿಜೆಪಿ ವಾಗ್ಧಾಳಿ

ರಾಜ್ಯದಲ್ಲಿ ಮುಂದುವರಿದ ಕಾಂಗ್ರೆಸ್ ಗೂಂಡಾಗಿರಿ ! ಅನಧಿಕೃತ ಬ್ಯಾನರ್ ತೆರವು ವಿಚಾರದಲ್ಲಿ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಅವ್ಯಾಚ ಶಬ್ಧಗಳಿಂದ ಧಮ್ಕಿ ಹಾಕಿದ ಕಾಂಗ್ರೆಸ್ ನಾಯಕ ! ಮಾನ್ಯ @siddaramaiahಅವರೇ, ಅಧಿಕಾರಿಗಳಿಗೆ ಬೆದರಿಕೆ ಹಾಕಿದ ಈ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ಕಾನೂನು ಕ್ರಮ ಕೈಗೊಳ್ಳುತ್ತೀರೋ ಅಥವಾ ಕಾನೂನು ಪಾಲಿಸಿದ ಅಧಿಕಾರಿಯನ್ನೇ ಎತ್ತಂಗಡಿ ಮಾಡಿಸುತ್ತೀರೋ? ಎಂದು ಬಿಜೆಪಿ ಕಿಡಿಕಾರಿದೆ.

ಮಹಿಳೆಯರನ್ನು ಅವಾಚ್ಯ ಶಬ್ದಗಳಿಂದ ನಿಂದಿಸುವುದು@INCKarnatakaದ ನಿಜಗುಣ!! ಶಿಡ್ಲಘಟ್ಟ ನಗರದಾದ್ಯಂತ ಹಾಕಿಸಿದ್ದ ಅಕ್ರಮ ಬ್ಯಾನರ್‌ಗಳನ್ನು ತೆರವುಗೊಳಿಸಿದ ಪುರಸಭೆ ಅಧಿಕಾರಿ ಅಮೃತಾ ಗೌಡ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ್ದಾರೆ ಅಲ್ಲಿನ ಕಾಂಗ್ರೆಸ್‌ ಮುಖಂಡ ರಾಜೀವ್‌ ಗೌಡ! ಸಿಎಂ@siddaramaiahಅವರೇ, ಡಿಸಿಎಂ @DKShivakumarಅವರೇ, ಗೃಹ ಸಚಿವ@DrParameshwara ಅವರೇ, ಇದೇನಾ ನಿಮ್ಮ ಸರ್ಕಾರದ ‘ಅಸಲಿ’ ಮಹಿಳಾ ಸಬಲೀಕರಣ??!! ಎಂದು ಬಿಜೆಪಿ ಟ್ವೀಟ್ ನಲ್ಲಿ ಹಿಗ್ಗಾಮುಗ್ಗಾ ವಾಗ್ಧಾಳಿ ನಡೆಸಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular