ಬೆಂಗಳೂರು: ಮಹಿಳೆಯೊಂದಿಗೆ ಅಕ್ರಮ ಸಂಬಂಧವನ್ನು ಪ್ರಶ್ನೆ ಮಾಡಿದ್ದಕ್ಕೆ ಕಾಂಗ್ರೆಸ್ ಮುಖಂಡ ಅಪ್ರಾಪ್ತ ಮಕ್ಕಳ ಮೇಲೆ ಹಲ್ಲೆ ನಡೆಸಿರುವ ಗಂಭೀರ ಆರೋಪ ಕೇಳಿಬಂದಿದ್ದು, ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನಲ್ಲಿ ಈ ಘಟನೆ ನಡೆದಿದೆ. ಬೆಂಗಳೂರು ಉತ್ತರ ಜೊಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಆನಂದ್ ನಾಯ್ಡು ವಿರುದ್ಧ ದೂರು ದಾಖಲಾಗಿದೆ. ಆನಂದ್ ನಾಯ್ಡು ಮಹಿಳೆಯೊಬ್ಬರ ಜೊತೆ ಅಕ್ರಮ ಸಂಬಂಧದಲ್ಲಿದ್ದು, ಮಹಿಳೆಯ ಪತಿ ಇದನ್ನು ಪ್ರಶ್ನಿಸಿದ್ದಾರೆ. ಆತನ ಮೇಲಿನ ಸೇಡಿಗೆ ಆನಂದ್ ನಾಯ್ಡು ಆತನ ಅಪ್ರಾಪ್ತ ಮಕ್ಕಳ ಮೇಲೆ ಮನಬಂದಂತೆ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ.
ಅಪ್ರಾಪ್ತ ಮಕ್ಕಳಿಗೆ ಕಚ್ಚಿ, ಕೈ-ಕಾಲುಗಳ ಮೇಲೆ ರಾಡ್ ನಿಂದ ಮನಬಂದಂತೆ ಹಲ್ಲೆ ನಡೆಸಿದದಗಿ ಮಕ್ಕಳು ಆನಂದ್ ನಾಯ್ಡು ವಿರುದ್ಧ ಆರೋಪ ಮಾಡಿದ್ದಾರೆ. ಪ್ರಕರಣ ಸಂಬಂಧ ಮಕ್ಕಳ ತಂದೆ ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ದೂರು ನೀಡಿದ್ದು, ಆನಂದ್ ನಾಯ್ಡು ವಿರುದ್ಧ ಪ್ರಕರಣ ದಾಖಲಾಗಿದೆ.

