ಚಿತ್ರದುರ್ಗ: ಮೂರು ದಿನಗಳಿಂದ ನಾಪತ್ತೆಯಾಗಿದ್ದ ಕಾಂಗ್ರೆಸ್ ಮುಖಂಡರೊಬ್ಬರು ಶವವಾಗಿ ಪತ್ತೆಯಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.
ಚಿತ್ರದುರ್ಗ ಜಿಲ್ಲೆಯ ಹೊರವಲಯದಲ್ಲಿ ನಿರ್ಜನ ಪ್ರದೇಶದಲ್ಲಿ ಗುರುತು ಸಿಗದ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಶಿವಲಿಂಗಪ್ಪ ಮೃತ ಕಾಂಗ್ರೆಸ್ ಮುಖಂಡ. ಶಿವಲಿಂಗಪ್ಪ ಅವರು ಚಿತ್ರದುರ್ಗದಲ್ಲಿ ರಸಗೊಬ್ಬರ ಅಂಗಡಿ ನಡೆಸುತ್ತಿದ್ದರು.
ಕಳೆದ ಮೂರು ದಿನಗಳಿಂದ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದರು. ಕುಟುಂಬದವರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಇಂದು ಮುಖ ಗುರುತು ಸಿಗದ ಸ್ಥಿತಿಯಲ್ಲಿ ಶಿವಲಿಂಗಪ್ಪ ಶವವಾಗಿ ಪತ್ತೆಯಾಗಿದ್ದಾರೆ.
ದುಷ್ಕರ್ಮಿಗಳು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸುವಂತೆ ಕುಟುಂಬದವರು ಆಗ್ರಹಿಸಿದ್ದಾರೆ. ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

