HomeKarnatakaBIG NEWS: ಸರ್ಕಾರದ ವಿರುದ್ಧ ಟೀಕೆ ಮಾಡಿದ್ದ ಕಾಂಗ್ರೆಸ್ ಮುಖಂಡನ ವಿರುದ್ಧ FIR

BIG NEWS: ಸರ್ಕಾರದ ವಿರುದ್ಧ ಟೀಕೆ ಮಾಡಿದ್ದ ಕಾಂಗ್ರೆಸ್ ಮುಖಂಡನ ವಿರುದ್ಧ FIR

ಮಂಡ್ಯ: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದ ಕಾಂಗ್ರೆಸ್ ಮುಖಂಡನ ವಿರುದ್ಧವೇ ಎಫ್ ಐ ಆರ್ ದಾಖಲಾಗಿರುವ ಘಟನೆ ನಡೆದಿದೆ.

ಪಾಂಡವಪುರ ತಾಲೂಕಿನ ಸುಂಕಾತೊಣ್ಣೂರು ಗ್ರಾಮದ ಮೋಹನ್ ಲಿಂಗೇಶ್ವರ್ ವಿರುದ್ಧ ಮೇಲುಕೋಟೆ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

800 ರೂಪಾಯಿ ವಿದ್ಯುತ್ ಬಿಲ್ ಹೆಚ್ಚು ಬಂದಿದ್ದಕ್ಕೆ ತಮ್ಮ ಸರ್ಕಾರದ ನಾಯಕರು ಸುಳ್ಳು ಭರವಸೆ ಕೊಟ್ಟು ಜನರ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಕಿಡಿಕಾರಿದ್ದರು. ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ಮೇಲುಕೋಟೆ ಪೊಲೀಸರು ಮೋಹನ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದರು.

ಮೋಹನ್ ವಿರುದ್ಧ ಐಪಿಸಿ ಸೆಕ್ಷನ್ 504, 507 ಅಡಿ ದೂರು ದಾಖಲಾಗಿದೆ.

 

For Latest News Updates, Join Our Whatsapp Community🚩
RELATED ARTICLES

Most Popular