HomeKarnatakaBIG NEWS: ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಬರ್ಬರ ಹತ್ಯೆ

BIG NEWS: ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಬರ್ಬರ ಹತ್ಯೆ

ಧಾರವಾಡ: ಧಾರವಾಡ ಯುವ ಕಾಂಗ್ರೆಸ್‌ ಘಟಕದ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಅವರನ್ನು ದುಷ್ಕರ್ಮಿಗಳು ಮನೆಯಲ್ಲೇ ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ.

ಧಾರವಾಡ ನಗರದ ಹಾಶ್ಮಿನಗರದಲ್ಲಿನ ಮನೆಯಲ್ಲಿ ಈ ಕೊಲೆ ನಡೆದಿದೆ. ಕೃತ್ಯದ ಬಳಿಕ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಸ್ಥಳಕ್ಕೆ ಉಪನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. 

ಫೈರೋಜ್ ಪಠಾಣ್ ಈ ಮೊದಲು ಎನ್‌ಎಸ್‌ಯುಐ ವಿದ್ಯಾರ್ಥಿ ಸಂಘಟನೆಯಲ್ಲಿ ಸಕ್ರಿಯರಾಗಿದ್ದರು ಎಂದು ತಿಳಿದುಬಂದಿದೆ. ಆದರೆ ಕೊಲೆ ಯಾರು ಮಾಡಿದ್ದಾರೆ? ಕಾರಣ ಏನು ಅನ್ನೋದು ಇನ್ನಷ್ಟೇ ತಿಳಿಯಬೇಕಿದೆ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸದ್ಯ ಫೈರೋಜ್ ಆಪ್ತರು ಸ್ಥಳಕ್ಕೆ ಆಗಮಿಸಿದ್ದಾರೆ. ಪೊಲೀಸ ಕಮಿಷನರ್ ಶಶಿಕುಮಾತ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಫೈರೋಜ್‌ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular