HomeKarnatakaಸಚಿವ ಮಧು ಬಂಗಾರಪ್ಪ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ: ಕಾಂಗ್ರೆಸ್ ನಾಯಕರ ಅವಹೇಳನ, ದೂರು

ಸಚಿವ ಮಧು ಬಂಗಾರಪ್ಪ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ: ಕಾಂಗ್ರೆಸ್ ನಾಯಕರ ಅವಹೇಳನ, ದೂರು

ಶಿವಮೊಗ್ಗ: ಸಚಿವ ಮಧು ಬಂಗಾರಪ್ಪ ಅವರ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆಯಲಾಗಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಶಿವಮೊಗ್ಗದ ಸಿಇಎನ್ ಪೊಲೀಸ್ ಠಾಣೆಗೆ ಪಕ್ಷದ ಮುಖಂಡ ಜಿ.ಡಿ. ಮಂಜುನಾಥ ದೂರು ನೀಡಿದ್ದಾರೆ.

ನಕಲಿ ಫೇಸ್ಬುಕ್ ಖಾತೆ ತೆರೆದವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ಸಂಚಾಲಕ ಮಂಜುನಾಥ್ ದೂರು ನೀಡಿದ್ದು, ಪೊಲೀಸರು ಕೇಸ್ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗ್ರೂಪ್ ಡಿಪಿಯಲ್ಲಿ ಮಧು ಬಂಗಾರಪ್ಪ ಫೋಟೋ ಬಳಸಲಾಗಿದೆ. ಕುಂದಾಪುರ ವಿರಾಟ್ ಹೆಸರಿನ ಫೇಸ್ಬುಕ್ ಖಾತೆ ತೆರೆದಯ ಫೋಟೋ ದುರ್ಬಳಕೆ ಮಾಡಿಕೊಂಡಿದ್ದು, ಅಚ್ಛೇ ದಿನ ವಿಚಾರವಾಗಿ ಸಚಿವರು, ಕಾಂಗ್ರೆಸ್ ಪಕ್ಷದ ವಿರುದ್ಧ ಪೋಸ್ಟ್ ಹಾಕಲಾಗಿದೆ. ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಫೋಟೋ ಬಳಸಿ ಅವಹೇಳನ ಮಾಡಲಾಗಿದೆ. ಬಹಳ ಜನ ಅಚ್ಛೆ ದಿನ ಎಲ್ಲಿ ಎಂದು ಪ್ರಶ್ನೆ ಮಾಡುತ್ತಿದ್ದರು. ಇದೇ ಅಚ್ಚೆ ದಿನ ನೋಡಿ ಖುಷಿ ಪಡಿ ಎಂದು ಫೇಸ್ಬುಕ್ನಲ್ಲಿ ಪೋಸ್ಟ್ ಹಾಕಿದ್ದಾರೆ. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಅಪಹಾಸ್ಯ ಮಾಡಲಾಗಿದೆ. ಸಚಿವರಿಗೆ ಕೆಟ್ಟ ಹೆಸರು ಬರುವಂತೆ, ಅವರ ಜನತೆಗೆ ಧಕ್ಕೆ ತರುವಂತೆ ಪೋಸ್ಟ್ ಹಾಕಲಾಗಿದೆ. ಈ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ದೂರು ನೀಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular