ಬೆಂಗಳೂರು : ದೇಶದ ವೀರ ಯೋಧರಿಗೆ ನಮನ ಸಲ್ಲಿಸಲು ಹಾಗೂ ನಮ್ಮ ಸಶಸ್ತ್ರ ಪಡೆಗಳ ಜತೆ ಬೆಂಬಲವಾಗಿ ನಿಲ್ಲಲು ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ‘ಜೈ ಹಿಂದ್ ‘ ಕಾರ್ಯಕ್ರಮ ಹಮ್ಮಿಕೊಂಡಿದೆ.
ಇಂದು ಬೆಂಗಳೂರಿನ ಟೌನ್ ಹಾಲ್ ನಲ್ಲಿ ಕಾರ್ಯಕ್ರಮ ನಡೆಯುತ್ತಿದ್ದು, ಭಾರತೀಯ ಸೇನೆಯ ಜಾಕೆಟ್ ತೊಟ್ಟು ‘ಜೈ ಹಿಂದ್’ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕರು ಭಾಗಿಯಾಗಿದ್ದಾರೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಸುರ್ಜೆವಾಲಾ ಮತ್ತಿತರಿದ್ದಾರೆ.

