BREAKING : ಜುಲೈ 7 ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಿಗದಿ

ಬೆಂಗಳೂರು : ಜುಲೈ 7 ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಿಗದಿಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಜುಲೈ 7 ರ ಬೆಳಗ್ಗೆ 9 ಗಂಟೆಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಸಭೆಯಲ್ಲಿ ಮಂತ್ರಿಮಂಡಲದ ಸಚಿವರು, ಶಾಸಕರು, ಹಿರಿಯ ಅಧಿಕಾರಿಗಳು ಭಾಗಿಯಾಗಲಿದ್ದಾರೆ. ಗ್ಯಾರಂಟಿ ಯೋಜನೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಮಹತ್ವದ ಚರ್ಚೆ ನಡೆಸಲಾಗುತ್ತದೆ ಎನ್ನಲಾಗಿದೆ.

ಹಗರಣಗಳ ತನಿಖೆಗೆ ಮುಂದಾದ ರಾಜ್ಯ ಸರ್ಕಾರಕ್ಕೆ ‘ಮಾಜಿ ಸಿಎಂ ಬೊಮ್ಮಾಯಿ’ ಸವಾಲ್

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿನ ಹಗರಣಗಳ ಬಗ್ಗೆ ತನಿಖೆಗೆ ಮುಂದಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಸವಾಲು ಹಾಕಿರುವ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಈ ಸರ್ಕಾರ ಭ್ರಷ್ಟಾಚಾರದ ವಿರುದ್ಧ ಇದ್ದುದೆ ಆದರೆ ಎಲ್ಲಾ ಪ್ರಕರಣಗಳನ್ನು ತನಿಖೆ ನಡೆಸಲಿ ಎಂದಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಬೊಮ್ಮಾಯಿ, ರಾಜಕೀಯ ಪ್ರೇರಿತವಾಗಿ ಸರ್ಕಾರ ತನಿಖೆಗೆ ಮುಂದಾದರೆ ಹೇಗೆ? ತನಿಖೆ ನಡೆಸುವುದಾದರೆ 2013ರಿಂದ 2023ರವರೆಗಿನ ಎಲ್ಲಾ ಕೇಸ್ ಗಳನ್ನು ತನಿಖೆಗಾಗಿ ಆಯೋಗದ ಮುಂದೆ ಇಡಲಿ ಎಂದು ಆಗ್ರಹಿಸಿದ್ದಾರೆ. ಒಂದುವರೆ ವರ್ಷಗಳ ಕಾಲ ನಮ್ಮ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿದರು. ಆರೋಪಕ್ಕೆ ಇದುವರೆಗೂ ದಾಖಲೆ ಕೊಟ್ಟಿಲ್ಲ. ತನಿಖೆಗೆ ಮುಂದಾದರೆ ನಮಗೆ ನ್ಯಾಯ ಸಿಗುವ ಭರವಸೆ ಇದೆ. ಎಲ್ಲಾ ಕೇಸ್ ಗಳನ್ನು ತನಿಖೆ ಮಾಡಲಿ ಎಂದು ಹೇಳಿದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read