BIGG NEWS : ಕಾಂಗ್ರೆಸ್ ಗೆ ಬಿಜೆಪಿಯಿಂದ 10-30 ಜನರು ಬರಬಹುದು : ಜಗದೀಶ್ ಶೆಟ್ಟರ್ ಹೊಸ ಬಾಂಬ್!

ಹುಬ್ಬಳ್ಳಿ : ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿರುವ ಆಪರೇಷನ್ ಹಸ್ತದ ಕುರಿತು ಚರ್ಚೆ ನಡೆಯುತ್ತಿರುವ ಹೊತ್ತಲ್ಲೇ ಕಾಂಗ್ರೆಸ್ ಎಂಎಲ್ ಸಿ ಜಗದೀಶ್ ಶೆಟ್ಟರ್ ಹೊಸ ಬಾಂಬ್ ಸಿಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಗೆ 10 ಜನರು ಬರಬಹುದು, 30 ಜನರು ಬರಬಹುದು, ಆದರೆ ಅವರ ಹೆಸರು ನಾನು ಹೇಳಲ್ಲ. ಹಲವು ನಾಯಕರು ನನಗೆ ಈಗಾಗಲೇ ಕರೆ ಮಾಡಿ ಮಾತನಾಡಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಸೇರುವ ಕುರಿತಂತೆ ಚರ್ಚೆ ನಡೆಸಿದ್ದಾರೆ ಎಂದರು.

ಬಿಜೆಪಿಯ ನಾಯಕರಷ್ಟೇ ಅಲ್ಲದೇ ತಳಮಟ್ಟದ ಕಾರ್ಯಕರ್ತರೂ ನನಗೆ ಕರೆ ಮಾಡುತ್ತಿದ್ದಾರೆ. ನನ್ನ ಮುಂದೆ ಬಹಳ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪಕ್ಷಕ್ಕೆ ಬರುವವರ ಹೆಸರು ನಾನು ಹೇಳಿದ್ರೆ ಅವರಿಗೆ ತೊಂದರೆ ಆಗಬಹುದು. ಸಮಯ ಬಂದಾಗ ಪಕ್ಷಕ್ಕೆ ಬರುವವರ ಹೆಸರನ್ನು ಹೇಳುತ್ತೇನೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read