HomeLatest NewsBREAKING: ಕಾಂಗ್ರೆಸ್ ನಾಯಕರ ಮ್ಯಾರಥಾನ್ ಸಭೆ ಮುಕ್ತಾಯ: ಯಾವುದೇ ಗುಟ್ಟು ಬಿಟ್ಟುಕೊಡದ ನಾಯಕರು: ಊಹಾಪೋಹ ನಿಲ್ಲಿಸಿ...

BREAKING: ಕಾಂಗ್ರೆಸ್ ನಾಯಕರ ಮ್ಯಾರಥಾನ್ ಸಭೆ ಮುಕ್ತಾಯ: ಯಾವುದೇ ಗುಟ್ಟು ಬಿಟ್ಟುಕೊಡದ ನಾಯಕರು: ಊಹಾಪೋಹ ನಿಲ್ಲಿಸಿ ಎಂದು ಸೂಚನೆ: ಕೆ.ಸಿ.ವೇಣುಗೋಪಾಲ್

ನವದೆಹಲಿ: ಕಾಂಗ್ರೆಸ್ ಹೈಕಮಾಂಡ್ ಮಟ್ಟದಲ್ಲಿ ನಡೆದ ಮ್ಯಾರಥಾನ್ ಸಭೆ ಮುಕ್ತಾಯಗೊಂಡಿದೆ. ಆದರೆ ನಾಯಕತ್ವ ಬದಲಾವಣೆ ವಿಚಾರವಾಗಿ ಸಭೆಯಲ್ಲಿ ಯಾವುದೇ ಚರ್ಚೆಗಳು ನಡೆದಿಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ತಿಳಿಸಿದ್ದಾರೆ.

ರಾಜ್ಯ ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಬದಲಾವಣೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರವಾಗಿ ಭಾರಿ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಹೈಕಮಾಂಡ್ ನಾಯಕರ ಬುಲಾವ್ ಮೇರೆಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಕೆಲ ಸಚಿವರೊಂದಿಗೆ ದೆಹಲಿಗೆ ದೌಡಾಯಿಸಿದ್ದರು. ಬೆಳಿಗ್ಗೆ 11 ಗಂಟೆಯಿಂದ ಎಐಸಿಸಿ ಕಚೇರಿ ಇಂದಿರಾ ಭವನದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಜೊತೆ ಪ್ರತ್ಯೇಕವಾಗಿ ಎರಡು ಸಭೆ ಹಾಗೂ ಬಳಿಕ ಹೈ ವೋಲ್ಟೇಜ್ ಮೀಟಿಂಗ್ ಎಂದು ಮೂರು ಹಂತದಲ್ಲಿ ಸಾಲು ಸಾಲು ಸಭೆಗಳನ್ನು ನಡೆಸಿದ್ದರು. ನಾಯಕತ್ವ ಬದಲಾವಣೆ ಚರ್ಚೆ, ಹಾಗೂ ಕಾಂಗ್ರೆಸ್ ರಾಜ್ಯ ನಾಯಕರ ಹೇಳಿಕೆಗಳ ಗೊಂದಲಗಳಿಗೆ ಹೈಕಮಾಂಡ್ ನಾಯಕರು ಇಂದೇ ತೆರೆ ಎಳೆಯಲಿದ್ದಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಸಭೆಯಲ್ಲಿ ನಡೆದ ಚರ್ಚೆ ಬಗ್ಗೆ ಕಾಂಗ್ರೆಸ್ ನಾಯಕರು ಗುಟ್ಟು ಬಿಟ್ಟುಕೊಟ್ಟಿಲ್ಲ. ಅಂತಹ ಯಾವುದೇ ಚರ್ಚೆ ನಡೆದೇ ಇಲ್ಲ ಎಂದು ಹೇಳಿಕೆ ನೀಡಿದ್ದಾರೆ.

ಮ್ಯಾರಥಾನ್ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಕಾಂಗ್ರೆಸ್ ನಲ್ಲಿ ಯಾವುದೇ ಗೊಂದಲಗಳು ಇಲ್ಲ. ಊಹಾಪೋಹಗಳನ್ನು ನಿಲ್ಲಿಸಿ ಎಂದು ವರಿಷ್ಠರು ಸೂಚನೆ ನೀಡಿದ್ದಾರೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಭೆಯಲ್ಲಿ ನಾವು ನಾಯಕತ್ವದ ಬಗ್ಗೆ ಚರ್ಚೆಯನ್ನೇ ನಡೆಸಿಲ್ಲ. ನಾವು ರಾಜ್ಯಸಭೆ, ವಿಧಾನ ಪರಿಷತ್ ಚುನಾವಣೆಗಳ ಬಗ್ಗೆ ಮಾತ್ರ ಚರ್ಚೆ ನಡೆಸಿದ್ದೇವೆ ಎಂದು ಸ್ಪಷ್ಟಪಡಿಸಿದರು. ಈ ಮೂಲಕ ಸಭೆಯಲ್ಲಿನ ಚರ್ಚೆ ಬಗ್ಗೆ ಕೈ ನಾಯಕರು ಯಾವುದೇ ಗುಟ್ಟು ಬಿಟ್ಟುಕೊಟ್ಟಿಲ್ಲ. ಆದರೆ ರಾಜ್ಯಸಭೆ ಹಾಗೂ ಪರಿಷತ್ ಚುನಾವಣೆಯ ಬಗ್ಗೆ ಬೆಳಿಗ್ಗೆಯಿಂದ ಸಂಜೆವರೆಗೂ ಇಷ್ಟೊಂದು ಗಂಭೀರ ಮಟ್ಟದಲ್ಲಿ ಸಭೆ ಮೇಲೆ ಸಭೆ ನಡೆಸಿ ಚರ್ಚಿಸಲಾಯಿತೇ? ಎಂಬ ಪ್ರಶ್ನೆ ಮೂಡಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular