HomeKarnatakaBIG NEWS: ಬಿಜೆಪಿ ನಾಯಕರಿಂದ 'ಕೈ' ಶಾಸಕರಿಗೆ 100 ಕೋಟಿ ಆಫರ್: ಕಾಂಗ್ರೆಸ್ ಶಾಸಕ ಗಂಭೀರ...

BIG NEWS: ಬಿಜೆಪಿ ನಾಯಕರಿಂದ ‘ಕೈ’ ಶಾಸಕರಿಗೆ 100 ಕೋಟಿ ಆಫರ್: ಕಾಂಗ್ರೆಸ್ ಶಾಸಕ ಗಂಭೀರ ಆರೋಪ

ಮಂಡ್ಯ: ರಾಜ್ಯ ಕಾಂಗ್ರೆಸ್ ಸರ್ಕಾರ ಬೀಳಿಸಲು ಬಿಜೆಪಿ ಷಡ್ಯಂತ್ರ ನಡೆಸಿದೆ. ಕಾಂಗ್ರೆಸ್ ಶಾಸಕರಿಗೆ ಬಿಜೆಪಿ ನಾಯಕರು ಕೋಟಿ ಕೋಟಿ ಹಣದ ಆಫರ್ ನೀಡಿ ಆಮಿಷವೊಡ್ಡುತ್ತಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಗಣಿಗ ರವಿ ಆರೋಪಿಸಿದ್ದಾರೆ.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಾಸಕ ಗಣಿಗ ರವಿ, ಕಾಂಗ್ರೆಸ್ ಶಾಸಕರ ಖರೀದಿಸಲು ಬಿಜೆಪಿಯವರು 100 ಕೋಟಿ ಆಫರ್ ನೀಡಿದ್ದಾರೆ ಎಂದರು.

ನಮ್ಮ ಸರ್ಕಾರ ಬಂಡೆಯಂತೆ ಗಟ್ಟಿಯಿದೆ. ಅಲುಗಾಡಿಸಲು ಸಾಧ್ಯವಿಲ್ಲ. ಆದರೆ ಬಿ.ಎಲ್.ಸಂತೋಷ್, ಶೋಭಾ ಕರಂದ್ಲಾಜೆ, ಹೆಚ್.ಡಿ.ಕುಮಾರಸ್ವಾಮಿ ಹಾಗೂ ಪ್ರಹ್ಲಾದ್ ಜೋಶಿ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರವನ್ನು ಬೀಳಿಸುವುದಾಗಿ ಪ್ರಧಾನಿ ಮೋದಿಯವರಿಗೆ ಐವರು ನಾಯಕರು ಮಾತುಕೊಟ್ಟಿದ್ದಾರೆ. ಹಾಗಾಗಿ ಕಾಂಗ್ರೆಸ್ ಶಾಸಕರುಗಳಿಗೆ ಬಿಜೆಪಿಯ ಬ್ರೋಕರ್ ಗಳು ಆಮಿಷವೊಡ್ಡುತ್ತಿದ್ದಾರೆ ಎಂದು ಕಿಡಿಕಾರಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಮ್ಮ ಶಾಸಕರು ಬಲಿಯಾಗಲ್ಲ. ನಾವು ಸಾಕ್ಷ್ಯಕಲೆಹಾಕುತ್ತಿದ್ದೇವೆ. ಅದನ್ನು ಇಡಿ ಅಧಿಕಾರಿಗಳಿಗೆ ಕೊಡುತ್ತೇವೆ. ಕರ್ನಾಟಕದಲ್ಲಿ ಕಾಂಗ್ರೆಸ್ ಗಟ್ಟಿಯಾಗಿದೆ. ಸರ್ಕಾರ ಬೀಳಿಸುವ ಬಿಜೆಪಿ ಹುನ್ನಾರ ನಡೆಯಲ್ಲ ಎಂದು ಹೇಳಿದರು.

 

For Latest News Updates, Join Our Whatsapp Community🚩
RELATED ARTICLES

Most Popular