HomeKarnatakaಪ್ರಧಾನಿ ಮೋದಿ, ಅಮಿತ್ ಶಾ ಟೀಕಿಸುವ ಭರದಲ್ಲಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ಶಾಸಕ

ಪ್ರಧಾನಿ ಮೋದಿ, ಅಮಿತ್ ಶಾ ಟೀಕಿಸುವ ಭರದಲ್ಲಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ಶಾಸಕ

ಗದಗ: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ವಿಚಾರವಾಗಿ ರಾಜ್ಯಪಾಲರು ಹಾಗೂ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ ಕಾಂಗ್ರೆಸ್ ಶಾಸಕ ಜಿ.ಎಸ್.ಪಾಟೀಲ್ ವಿವಾದ ಸೃಷ್ಟಿಸಿದ್ದಾರೆ.

ಗದಗ ಜಿಲ್ಲೆಯ ಗಜೇಂದ್ರಗಢದಲ್ಲಿ ನಡೆದ ಅಹಿಂದ ಸಮಾವೇಶದಲ್ಲಿ ಮಾತನಾಡಿದ ರೋಣ ಶಾಸಕ ಜಿ.ಎಸ್.ಪಾಟೀಲ್, ಬಾಂಗ್ಲಾದಲ್ಲಿ ಜನರು ಪ್ರಧಾನಿ ಮನೆಗೆ ನುಗ್ಗಿ ಹೇಗೆ ಆಕ್ರೋಶ ವ್ಯಕ್ತಪಡಿಸಿದರೋ, ಹಾಗೇ ನಮ್ಮ ದೇಶದಲ್ಲಿಯೂ ಪ್ರಧಾನಿ ಮನೆಗೆ ನುಗ್ಗುವ ದಿನಗಳು ದೂರವಿಲ್ಲ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಪ್ರಧಾನಿ ಮೋದಿ, ಅಮಿತ್ ಶಾ ಅವರನ್ನು ಟೀಕಿಸುವ ಬರದಲ್ಲಿ ಜಿ.ಎಸ್.ಪಾಟೀಲ್ ವಿವಾದ ಸೃಷ್ಟಿಸಿದ್ದಾರೆ. ನಾವೆಲ್ಲರೂ ಒಂದಾಗಬೇಕು, ಧ್ವನಿಗಟ್ಟಿಗೊಳಿಸಿ ಹೋರಾಟ ನಡೆಸಬೇಕು. ಸಿಎಂ ಸಿದ್ದರಾಮಯ್ಯ ಹಗೂ ಕಾಂಗ್ರೆಸ್ ನಾಯಕರ ವಿರುದ್ಧ ಬಿಜೆಪಿ ಹುನ್ನಾರ ನಡೆಸುತ್ತಿದೆ. ಈ ದೇಶ ಯಾವ ರೀತಿ ಮುನ್ನಡೆಯಬೇಕೆಂಬ ಬಗ್ಗೆ ಯೋಚಿಸಬೇಕು ಎಂದು ಕರೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular