HomeKarnatakaBREAKING NEWS: ಬೆಳ್ಳಂಬೆಳಗ್ಗೆ ಮಾಲೂರು ಕಾಂಗ್ರೆಸ್ ಶಾಸಕ ನಂಜೇಗೌಡರಿಗೆ ಇಡಿ ಶಾಕ್: ಕೋಚಿಮುಲ್ ನೇಮಕಾತಿ ಅಕ್ರಮ...

BREAKING NEWS: ಬೆಳ್ಳಂಬೆಳಗ್ಗೆ ಮಾಲೂರು ಕಾಂಗ್ರೆಸ್ ಶಾಸಕ ನಂಜೇಗೌಡರಿಗೆ ಇಡಿ ಶಾಕ್: ಕೋಚಿಮುಲ್ ನೇಮಕಾತಿ ಅಕ್ರಮ ಆರೋಪ ಹಿನ್ನಲೆ ದಾಳಿ ನಡೆಸಿ ಪರಿಶೀಲನೆ

ಬೆಂಗಳೂರು: ಮಾಲೂರು ಕಾಂಗ್ರೆಸ್ ಶಾಸಕ ಕೆ.ವೈ. ನಂಜೇಗೌಡರ ಮನೆಯ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಕೋಲಾರ ಜಿಲ್ಲೆ ಮಾಲೂರು ಶಾಸಕ ಕೆ.ವೈ. ನಂಜೇಗೌಡ ಅವರ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೋಲಾರ -ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ಅಧ್ಯಕ್ಷರಾಗಿರುವ ನಂಜೇಗೌಡ ಅವರಿಗೆ ಸೇರಿದ ನಾಲ್ಕು ಸ್ಥಳಗಳಲ್ಲಿ ಇಡಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಾಲೂರು ತಾಲೂಕಿನ ಕೊಮ್ಮನಹಳ್ಳಿಯಲ್ಲಿರುವ ಮನೆಯಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗಿದೆ. ಹತ್ತೂರು ಹೋಬಳಿಯ ಕೋಚಿಮುಲ್ ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸಲಾಗಿದೆ. ಕೊಮ್ಮನಹಳ್ಳಿ ನಂಜುಂಡೇಶ್ವರ ಸ್ಟೋನ್ ಕ್ರಷರ್ ನಲ್ಲಿ ಪರಿಶೀಲನೆ ನಡೆಸಲಾಗಿದೆ. ಕೋಚಿಮುಲ್ ನೇಮಕಾತಿಯಲ್ಲಿ ಅವ್ಯವಹಾರ ಆರೋಪ ಹಿನ್ನಲೆ ದಾಳಿ ನಡೆಸಲಾಗಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular