HomeKarnatakaಸರ್ಕಾರ ಕೆಡವಲು ಶಾಸಕರಿಗೆ 50 ಕೋಟಿಯಲ್ಲ, 100 ಕೋಟಿ ಆಫರ್: ಕಾಂಗ್ರೆಸ್ ಶಾಸಕ ರವಿಕುಮಾರ್ ಸ್ಪೋಟಕ...

ಸರ್ಕಾರ ಕೆಡವಲು ಶಾಸಕರಿಗೆ 50 ಕೋಟಿಯಲ್ಲ, 100 ಕೋಟಿ ಆಫರ್: ಕಾಂಗ್ರೆಸ್ ಶಾಸಕ ರವಿಕುಮಾರ್ ಸ್ಪೋಟಕ ಹೇಳಿಕೆ

ಮಂಡ್ಯ: ರಾಜ್ಯ ಕಾಂಗ್ರೆಸ್ ಸರ್ಕಾರ ಕೆಡವಲು ಬಿಜೆಪಿಯಿಂದ ನಮ್ಮ ಶಾಸಕರಿಗೆ 50 ಕೋಟಿಯಲ್ಲ, 100 ಕೋಟಿ ರೂ. ಆಫರ್ ನೀಡಲಾಗಿದೆ ಎಂದು ಶಾಸಕ ಪಿ. ರವಿಕುಮಾರ್ ಗಣಿಗ ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಮಂಡ್ಯದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕರ ಖರೀದಿಗೆ 100 ಕೋಟಿ ರೂಪಾಯಿ ಆಫರ್ ಕೊಡಲಾಗಿದೆ. ಬಿಜೆಪಿಯವರು ನಮ್ಮ ಶಾಸಕರನ್ನು ಭೇಟಿಯಾಗಿ ಹಣದ ಆಮಿಷವೊಡ್ಡಿದ ಬಗ್ಗೆ ಶೀಘ್ರವೇ ದಾಖಲೆ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಸಿಎಂ ಸಿದ್ಧರಾಮಯ್ಯ ಇತ್ತೀಚೆಗೆ ಕಾಂಗ್ರೆಸ್ ಶಾಸಕರಿಗೆ 50 ಕೋಟಿ ರೂ. ಆಫರ್ ಮಾಡಿದ್ದರ ಬಗ್ಗೆ ಪ್ರಸ್ತಾಪಿಸಿದ್ದರು. ಇದೀಗ ರವಿಕುಮಾರ್ ಗಣಿಗ, 100 ಕೋಟಿ ರೂ. ಆಫರ್ ಕೊಡಲಾಗಿದೆ. ನಮ್ಮ ಪಕ್ಷದ ಶಾಸಕರನ್ನು ಬಿಜೆಪಿಯವರು ಎಲ್ಲಿ ಭೇಟಿ ಮಾಡಿದ್ದರು ಎನ್ನುವುದರ ಬಗ್ಗೆ ದಾಖಲೆ ಇವೆ. ಆಪರೇಷನ್ ಕಮಲದ ಸಾಕ್ಷ್ಯಗಳನ್ನು ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular