BIG NEWS: ನನ್ನ ಕ್ಷೇತ್ರಕ್ಕೆ ನೀರು ಬಿಡದಿದ್ದರೆ ರಾಜೀನಾಮೆ ನೀಡುತ್ತೇನೆ; ಸರ್ಕಾರದ ವಿರುದ್ಧವೇ ಅಸಮಾಧಾನ ಹೊರಹಾಕಿದ ಕಾಂಗ್ರೆಸ್ ಶಾಸಕ

ವಿಜಯಪುರ: ನನ್ನ ಕ್ಷೇತ್ರದ ಗ್ರಾಮಗಳಿಗೆ ನೀರು ಬಿಡದಿದ್ದರೆ ರಾಜೀನಾಮೆ ನೀಡುತ್ತೇನೆ ಎಂದು ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ್ ಎಚ್ಚರಿಕೆ ನೀಡಿದ್ದಾರೆ.

ವಿಜಯಪುರದಲ್ಲಿ ಮಾತನಾಡಿದ ಇಂಡಿ ಕ್ಷೇತ್ರದ ಶಾಸಕ ಯಶವಂತರಾಯಗೌಡ ಪಾಟೀಲ್, ನನ್ನ ಕ್ಷೇತ್ರದ ಯಾವುದೇ ಹಳ್ಳಿಗಳಿಗೂ ಕಾಲುವೆ ನೀರು ಬಂದಿಲ್ಲ. ಗುತ್ತಿ ಬಸವಣ್ಣ ಏತ ನೀರಾವರಿ, ಇಂಡಿ ಶಾಖಾ ಕಾಲುವೆಯಿಂದ ನೀರು ಹರಿಸಬೇಕು. ಜನರು ನೀರಿಲ್ಲದೇ ಸಂಕಷ್ಟ ಪಡುತ್ತಿದ್ದಾರೆ. ನನ್ನ ಕ್ಷೇತ್ರಕ್ಕೆ ಒಂದು ವೇಳೆ ನೀರು ಬಿಡದಿದ್ದರೆ ನಾನು ರಾಜೀನಾಮೆ ನೀಡುತ್ತೇನೆ ಎಂದಿದ್ದಾರೆ.

ಇಂಡಿ ಕ್ಷೇತ್ರದ ಕಟ್ಟ ಕಡೆಯ ಹಳ್ಳಿಗೂ ನೀರು ಬಂದಿಲ್ಲ. ಜಿಲ್ಲಾಡಳಿತದ ನಿರ್ಲಕ್ಷಕ್ಕೆ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಕ್ಷೇತ್ರದ ಜನರಿಗೆ ಅನುಕೂಲವಾಗುತ್ತಿಲ್ಲ ಅಂದಮೇಲೆ ನಾನು ನಾಳೆಯೇ ರಾಜೀನಾಮೆ ಕೊಡುತ್ತೇನೆ. ನಾಡಿದ್ದು ರಾಜಕೀಯದಿಂದಲೇ ನಿವೃತ್ತಿ ಪಡೆಯುತ್ತೇನೆ ಎಂದು ಹೇಳಿದ್ದಾರೆ.

ಜನರ ಆಶಯ ಈಡೇರಿಸಲು ಆಗಲ್ಲ ಅಂದಮೇಲೆ ರಾಜಕೀಯದಲ್ಲಿದ್ದು ಪ್ರಯೋಜನವಿಲ್ಲ. ನೀರು ಬರದಿದ್ದರೆ ನಾನು ಯಾರಿಗೂ ಕೇರ್ ಮಾಡಲ್ಲ ಎಂದು ಗುಡುಗಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read