HomeLatest NewsBREAKING: ಕಾಂಗ್ರೆಸ್ ಶಾಸಕ ಷಡಕ್ಷರಿ ಅಸ್ವಸ್ಥ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲು

BREAKING: ಕಾಂಗ್ರೆಸ್ ಶಾಸಕ ಷಡಕ್ಷರಿ ಅಸ್ವಸ್ಥ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲು

ನವದೆಹಲಿ: ತಿಪಟೂರು ಕಾಂಗ್ರೆಸ್ ಶಾಸಕ ಷಡಕ್ಷರಿ ಅವರು ತೀವ್ರ ಅನಾರೋಗ್ಯಕ್ಕೀಡಾಗಿದ್ದು, ನವದೆಹಲಿಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ದೆಹಲಿಯ ಕರ್ನಾಟಕ ಭವನದಲ್ಲಿದ್ದಾಗ ಶಾಸಕ ಷಡಕ್ಷರಿ ಏಕಾಏಕಿ ಅಸ್ವಸ್ಥರಾಗಿದ್ದು, ಅಲ್ಲಿಯೇ ಇದ್ದ ಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ ಅವರು ಶಾಸಕ ಷಡಕ್ಷರಿ ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಸದ್ಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಶಾಸಕ ಷಡಕ್ಷರಿ ಅವರು ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಲು ದೆಹಲಿಗೆ ತೆರಳಿದ್ದರು. ಈ ವೇಳೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular