ಐವರು ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿ ಕೋರ್ಟ್ ಮೆಟ್ಟಿಲೇರಿದ ಕಾಂಗ್ರೆಸ್..!

ಅಸ್ಸಾಂನಲ್ಲಿ ಇತ್ತೀಚೆಗೆ ಮುಕ್ತಾಯಗೊಂಡ ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ ಐದು ಕಾಂಗ್ರೆಸ್ ಶಾಸಕರು ಬಿಜೆಪಿ ಅಥವಾ ಇತರ ಪಕ್ಷದ ಅಭ್ಯರ್ಥಿಗಳನ್ನು ಬಹಿರಂಗವಾಗಿ ಬೆಂಬಲಿಸಿದ್ದಾರೆ. ಈ ಹಿನ್ನೆಲೆ ಐವರು ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿ ಅಸ್ಸಾಂ ಕಾಂಗ್ರೆಸ್ ಕೋರ್ಟ್ ಮೆಟ್ಟಿಲೇರಿದೆ.

ಕಾಂಗ್ರೆಸ್ ಪಕ್ಷದ ರಾಜ್ಯ ಘಟಕವು ಐದು ಶಾಸಕರನ್ನು ಅನರ್ಹಗೊಳಿಸಲು ಸಿದ್ದವಾಗಿದೆ ಮತ್ತು ಪಕ್ಷವು ನ್ಯಾಯಾಲಯವನ್ನು ಸಂಪರ್ಕಿಸಲಿದೆ ಎಂದು ಭೂಪೇನ್ ಬೋರಾ ಹೇಳಿದರು.

ಮುಸ್ಲಿಂ ಬಾಹುಳ್ಯವಿರುವ ರಾಜ್ಯದ ಕರೀಂಗಂಜ್ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ. ಬಿಜೆಪಿ ಪರ ವ್ಯಾಪಕವಾಗಿ ಪ್ರಚಾರ ನಡೆಸಿದ ಇಬ್ಬರು ಕಾಂಗ್ರೆಸ್ ಶಾಸಕರಾದ ಕಮಲಾಖ್ಯ ಡೇ ಪುರ್ಕಾಯಸ್ಥ ಮತ್ತು ಸಿಫ್ದೆಕ್ ಅಹ್ಮದ್ ಈ ಕ್ಷೇತ್ರದಲ್ಲಿ ಆಡಳಿತ ಪಕ್ಷದ ಆಶ್ಚರ್ಯಕರ ಪ್ರದರ್ಶನಕ್ಕೆ ಕಾರಣ ಎಂದು ಹೇಳಲಾಗಿದೆ. ಇತರ ಇಬ್ಬರು ಶಾಸಕರಾದ ಶಹಿಲಾಂತ ದಾಸ್ ಮತ್ತು ಬಸಂತ ದಾಸ್ ಕೂಡ ತಮ್ಮ ತವರು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸಿದರೆ, ಕಾಂಗ್ರೆಸ್ನಿಂದ ಅಮಾನತುಗೊಂಡ ಶೆರ್ಮನ್ ಅಲಿ ಅಹ್ಮದ್ ಎಐಯುಡಿಎಫ್ ಪರವಾಗಿ ಕೆಲಸ ಮಾಡಿದರು.ಈ ಐವರು ಶಾಸಕರನ್ನು ಅನರ್ಹಗೊಳಿಸುವಂತೆ ಕಾಂಗ್ರೆಸ್ ಪಕ್ಷದ ರಾಜ್ಯ ಘಟಕ ಈಗಾಗಲೇ ಅಸ್ಸಾಂ ವಿಧಾನಸಭೆಯ ಸ್ಪೀಕರ್ ಗೆ ಮನವಿ ಮಾಡಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read