ಯಾದಗಿರಿ: ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ಯಾದಗಿರಿ ಜಿಲ್ಲೆಯ ಕನಕಗಿರಿ ವೃತ್ತದ ಬಳಿ ನಡೆದಿದೆ.
ಕಚೇರಿ ಮೇಲೆ ಪೆಟ್ರೋಲ್ ಸುರಿದು ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ನಿನ್ನೆ ಮಧ್ಯರಾತ್ರಿ ಈ ಘಟನೆ ನಡೆದಿದೆ. ಕಾಂಗ್ರೆಸ್ ಕಚೇರಿಯಲ್ಲಿದ್ದ ಪೀಠೋಪಕರಣಗಳು, ಸೋಫಾ, ಎಸಿ ಸೇರಿ ಹಲವು ವಸ್ತಿಗಳು ಬೆಂಕಿಗಾಹುತಿಯಾಗಿವೆ.
ಘಟನಾ ಸ್ಥಳಕ್ಕೆ ಯಾದಗಿರಿ ನಗರ ಠಾಣೆ ಪೊಲೀಸರು ಹಾಗೂ ಶ್ವಾನ ದಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಕಾರಣ ತಿಳಿದುಬಂದಿಲ್ಲ. ಕಿಡಿಗೇಡಿಗಳ ಪತ್ತೆಗಾಗಿ ಶೋಧ ನಡೆಸಲಾಗುತ್ತಿದೆ.