HomeLatest Newsಕಾಂಗ್ರೆಸ್ ಕಚೇರಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಪೀಠೋಪಕರಣಗಳು, ಸೋಫಾ, ಎಸಿ ಸೇರು ಹಲವು ವಸ್ತುಗಳು ಸುಟ್ಟು...

ಕಾಂಗ್ರೆಸ್ ಕಚೇರಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಪೀಠೋಪಕರಣಗಳು, ಸೋಫಾ, ಎಸಿ ಸೇರು ಹಲವು ವಸ್ತುಗಳು ಸುಟ್ಟು ಕರಕಲು

ಯಾದಗಿರಿ: ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ಯಾದಗಿರಿ ಜಿಲ್ಲೆಯ ಕನಕಗಿರಿ ವೃತ್ತದ ಬಳಿ ನಡೆದಿದೆ.

ಕಚೇರಿ ಮೇಲೆ ಪೆಟ್ರೋಲ್ ಸುರಿದು ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ನಿನ್ನೆ ಮಧ್ಯರಾತ್ರಿ ಈ ಘಟನೆ ನಡೆದಿದೆ. ಕಾಂಗ್ರೆಸ್ ಕಚೇರಿಯಲ್ಲಿದ್ದ ಪೀಠೋಪಕರಣಗಳು, ಸೋಫಾ, ಎಸಿ ಸೇರಿ ಹಲವು ವಸ್ತಿಗಳು ಬೆಂಕಿಗಾಹುತಿಯಾಗಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನಾ ಸ್ಥಳಕ್ಕೆ ಯಾದಗಿರಿ ನಗರ ಠಾಣೆ ಪೊಲೀಸರು ಹಾಗೂ ಶ್ವಾನ ದಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಕಾರಣ ತಿಳಿದುಬಂದಿಲ್ಲ. ಕಿಡಿಗೇಡಿಗಳ ಪತ್ತೆಗಾಗಿ ಶೋಧ ನಡೆಸಲಾಗುತ್ತಿದೆ.

For Latest News Updates, Join Our Whatsapp Community🚩
RELATED ARTICLES

Most Popular