HomeKarnatakaಕಾಂಗ್ರೆಸ್ ನ `ಆಪರೇಷನ್ ಹಸ್ತ’ ಯಶಸ್ವಿಯಾಗಲ್ಲ : ಮಾಜಿ ಸಿಎಂ ಬೊಮ್ಮಾಯಿ

ಕಾಂಗ್ರೆಸ್ ನ `ಆಪರೇಷನ್ ಹಸ್ತ’ ಯಶಸ್ವಿಯಾಗಲ್ಲ : ಮಾಜಿ ಸಿಎಂ ಬೊಮ್ಮಾಯಿ

ಹುಬ್ಬಳ್ಳಿ : ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸೀಟು ಗೆಲ್ಲಲು ಕಾಂಗ್ರೆಸ್ ಪಕ್ಷದವರು ಕೈ ಹಾಕಿರುವ ಆಪರೇಷನ್ ಹಸ್ತ ಯಶಸ್ವಿಯಾಗಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಗೆ ಲೋಕಸಭೆ ಚುನಾವಣೆಗೆ ಸೋಲಿನ ಭೀತಿ ಎದುರಾಗಿದೆ. ಹೀಗಾಗಿ ಆಪರೇಷನ್ ಹಸ್ತಕ್ಕೆ ಕೈ ಹಾಕಿದೆ. ಆದರೆ ಕಾಂಗ್ರೆಸ್​​ ಪಕ್ಷದವರ ಆಪರೇಷನ್ ಹಸ್ತ ಯಶಸ್ವಿ ಆಗಲ್ಲ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನ ಗೆಲ್ಲಲ್ಲ ಎಂಬ ಮಾಹಿತಿ ಬಂದ ಹಿನ್ನೆಲೆಯಲ್ಲಿ ಆಪರೇಷನ್ ಹಸ್ತ ಮಾಡುತ್ತಿದೆ. ಕಾಂಗ್ರೆಸ್​​ ಪಕ್ಷದವರ ಆಪರೇಷನ್ ಹಸ್ತ ಯಶಸ್ವಿ ಆಗುವುದಿಲ್ಲ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್​​​ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular