HomeKarnatakaಕಾಂಗ್ರೆಸ್ ಪಕ್ಷ ಭ್ರಷ್ಟರ ಕೂಟ : ಕಾರ್ಟೂನ್ ಮೂಲಕ ಕಾಲೆಳೆದ ಬಿಜೆಪಿ

ಕಾಂಗ್ರೆಸ್ ಪಕ್ಷ ಭ್ರಷ್ಟರ ಕೂಟ : ಕಾರ್ಟೂನ್ ಮೂಲಕ ಕಾಲೆಳೆದ ಬಿಜೆಪಿ

ಬೆಂಗಳೂರು : ಕಾಂಗ್ರೆಸ್ ಪಕ್ಷ ಭ್ರಷ್ಟರ ಕೂಟ ಎಂದು ಬಿಜೆಪಿ ( BJP)   ಕಾರ್ಟೂನ್ ಮೂಲಕ ಕಾಲೆಳೆದಿದೆ.

ರಾಜ್ಯ ಸರ್ಕಾರದ ವಿರುದ್ಧ ಸರಣಿ ಪೋಸ್ಟ್ ವಾರ್ ನಡೆಸಿದ್ದ ಬಿಜೆಪಿ ಇದೀಗ ಸರ್ಕಾರದ ವಿರುದ್ಧ ಕಾರ್ಟೂನ್ ಕ್ರಿಯೇಟ್ ಮಾಡಿ ವ್ಯಂಗ್ಯವಾಡಿದೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣದ ಬಗ್ಗೆ ವ್ಯಂಗ್ಯವಾಡಿದ ಬಿಜೆಪಿ ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ತನಿಖೆ ಮಾಡಲು ಬಂದ ತನಿಖಾ ದಳವನ್ನು ಸಚಿವ ಸಂಪುಟ ಎಳೆಯುತ್ತಿರುವ ಕಾರ್ಟೂನ್ ಪೋಸ್ಟ್ ಮಾಡಲಾಗಿದೆ.

ಕಂಟ್ರೋಲ್ ರೂಂ ತೆರೆಯಲು ಚಿಂತನೆ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ನಮ್ಮ ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಟ್ಟುಕೊಂಡು ಪೊಲೀಸ್ ಕಿರುಕುಳ ನೀಡುತ್ತಿರುವ ಬಗ್ಗೆ ದೂರುಗಳು ಕೇಳಿಬರುತ್ತಿವೆ. ಸಾಮಾಜಿಕ ಜಾಲತಾಣ ಸೇರಿದಂತೆ ಯಾವುದೇ ವೇದಿಕೆಗಳಲ್ಲಿ ಕಾಂಗ್ರೆಸ್ ಸರ್ಕಾರದ ಜನವಿರೋಧಿ ಧೋರಣೆಯ ವಿರುದ್ಧ ಹಾಗೂ ಸರ್ಕಾರದ ವೈಫಲ್ಯಗಳ ವಿರುದ್ಧ ದನಿ ಎತ್ತಲು ಕಾರ್ಯಕರ್ತರು ಯಾವುದಕ್ಕೂ ಅಂಜ ಬೇಕಿಲ್ಲ, ಎದೆಗುಂದ ಬೇಕಿಲ್ಲ. ಸಂವಿಧಾನ ನಮಗೆ ಕೊಡಮಾಡಿರುವ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಲು, ಕಾನೂನು ಪೋಲಿಸರಿಗೆ ಅಧಿಕಾರ ನೀಡಿಲ್ಲ, ಈ ನಿಟ್ಟಿನಲ್ಲಿ ರಾಜ್ಯದ ಯಾವುದೇ ಮೂಲೆಯಲ್ಲೂ ನಮ್ಮ ಕಾರ್ಯಕರ್ತ ಬಂಧುಗಳಿಗೆ ತೊಂದರೆ, ಬೆದರಿಕೆ, ಕಿರುಕುಳಗಳು ಎದುರಾದರೆ ಅವರ ನೆರವಿಗೆ ಪಕ್ಷ ತಕ್ಷಣ ಬರಲಿದೆ. ಇಷ್ಟರಲ್ಲೇ ರಾಜ್ಯ ಹಾಗೂ ಜಿಲ್ಲೆಯ ಪಕ್ಷದ ಕಛೇರಿಗಳಲ್ಲಿ ಕಾನೂನು ನೆರವಿಗಾಗಿ ದಿನದ 24 ಗಂಟೆಯೂ ಕಾರ್ಯ ನಿರ್ವಹಿಸಲು ಕಂಟ್ರೋಲ್ ರೂಂ ತೆರೆಯುವ ಬಗ್ಗೆ ನಿರ್ಧರಿಸಲಾಗುವುದು ಎಂದು B.Y ವಿಜಯೇಂದ್ರ ಟ್ವೀಟ್ ಮಾಡಿದ್ದಾರೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular