HomeKarnatakaರಾಜ್ಯದಲ್ಲಿ ಪೊಲೀಸ್‌ ಠಾಣೆಗಳು ಕಾಂಗ್ರೆಸ್‌ ಕಚೇರಿಗಳಾಗಿವೆ: ಆರ್.ಅಶೋಕ್ ವಾಗ್ದಾಳಿ

ರಾಜ್ಯದಲ್ಲಿ ಪೊಲೀಸ್‌ ಠಾಣೆಗಳು ಕಾಂಗ್ರೆಸ್‌ ಕಚೇರಿಗಳಾಗಿವೆ: ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ಎಸ್‌ಐಆರ್‌ ವಿಚಾರದಲ್ಲಿ ಬಿಜೆಪಿ-ಜೆಡಿಎಸ್‌ ಕಾರ್ಯಕರ್ತರಿಗೆ ಕಿರುಕುಳ ನೀಡುತ್ತಿರುವ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಕ್ರಮ ಕೈಗೊಳ್ಳುವಂತೆ ವಿಪಕ್ಷ ನಾಯಕ ಆರ್‌.ಅಶೋಕ ಹಾಗೂ ಜೆಡಿಎಸ್ ನಾಯಕ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದ ಬಿಜೆಪಿ-ಜೆಡಿಎಸ್ ನಿಯೋಗ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರಿಗೆ ದೂರು ಸಲ್ಲಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎಸ್ ಐಆರ್ ಪ್ರಕ್ರಿಯೆಯಲ್ಲಿ ಆಯೋಗದ ಫಾರ್ಮ್-7 ದುರ್ಬಳಕೆ ಆರೋಪ ಸಂಬಂಧ ಕಾರ್ಯಕರ್ತರ ವಿರುದ್ಧ ಎಫ್ಐಆರ್ ದಾಖಲಿಸುತ್ತಿರುವ ಸರ್ಕಾರದ ವಿರುದ್ಧ ಕ್ರಮಕ್ಕೆ ಆಗ್ರಹಿಸಿದರು.

ರಾಜಭವನಕ್ಕೆ ಭೇಟಿ ನೀಡಿ ದೂರು ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ್, ರಾಜ್ಯದಲ್ಲಿ ಪೊಲೀಸ್‌ ಠಾಣೆಗಳು ಕಾಂಗ್ರೆಸ್‌ ಕಚೇರಿಗಳಾಗಿವೆ. ಬಿಜೆಪಿ, ಜೆಡಿಎಸ್‌ ಕಾರ್ಯಕರ್ತರನ್ನು ಅನವಶ್ಯಕವಾಗಿ ಕರೆಸಿ ವಿಚಾರಣೆ ಮಾಡಲಾಗುತ್ತಿದೆ. ಯಾರು ಬೇಕಾದರೂ ಫಾರ್ಮ್‌ 7 ಸಲ್ಲಿಸಬಹುದು ಹಾಗೂ ಪ್ರಕರಣ ದಾಖಲಿಸಲು ಯಾರಿಗೂ ಹೇಳಿಲ್ಲ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.

ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದರೆ ಅದನ್ನು ಮತದಾರರು ಪ್ರಶ್ನೆ ಮಾಡಬಹುದು. ಇಲ್ಲಿ ಪೊಲೀಸರು ಅಥವಾ ಸರ್ಕಾರ ಮಧ್ಯಪ್ರವೇಶ ಮಾಡುವಂತಿಲ್ಲ. ಆದರೆ ಕಾಂಗ್ರೆಸ್‌ ಸರ್ಕಾರ ಪೊಲೀಸರ ಮೂಲಕ ಫಾರ್ಮ್‌ 7 ಸಲ್ಲಿಸಿದವರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸುತ್ತಿದೆ ಎಂದರು.

ಕಾಂಗ್ರೆಸ್‌ಗೆ ಚುನಾವಣೆಯ ಭಯ ಶುರುವಾಗಿದೆ. ಮುಂದೆ ಎನ್‌ಡಿಎ ಅಧಿಕಾರಕ್ಕೆ ಬರಲಿದೆ ಎಂಬುದು ಗೊತ್ತಾಗಿದೆ. ಆದ್ದರಿಂದ ಕಾರ್ಯಕರ್ತರಿಗೆ ಕಿರುಕುಳ ನೀಡಲಾಗುತ್ತಿದೆ ಎಂದರು.

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹಾಗೂ ಬಿ.ಕೆ.ಹರಿಪ್ರಸಾದ್‌ ತಮ್ಮ ಹಳೆಯ ದಿನಗಳಂತೆಯೇ ರೌಡಿಗಳಂತೆ ನಡೆದುಕೊಳ್ಳುತ್ತಿದ್ದಾರೆ. ಆದರೆ ಈ ಗೂಂಡಾಗಿರಿಗೆ ನಾವು ಭಯ ಪಡುವುದಿಲ್ಲ. ಬಿಜೆಪಿ ಕಾರ್ಯಕರ್ತರನ್ನು ಸರ್ಕಾರ ಟಾರ್ಗೆಟ್‌ ಮಾಡಬಾರದು, ಸರ್ಕಾರವನ್ನು ವಜಾ ಮಾಡಬೇಕು ಎಂದು ರಾಜ್ಯಪಾಲರಿಗೆ ಕೋರಲಾಗಿದೆ. ಡಿಜಿ ಹಾಗೂ ಮುಖ್ಯ ಕಾರ್ಯದರ್ಶಿಯನ್ನು ಕರೆದು ಮಾತಾಡುತ್ತೇನೆ ಎಂದು ರಾಜ್ಯಪಾಲರು ಭರವಸೆ ನೀಡಿದ್ದಾರೆ ಎಂದರು.

ಇದೇ ವೇಳೆ ಬಸ್ ಟಿಕೆಟ್ ದರ ಏರಿಕೆಗೆ ಆರ್,ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು. ಬಸ್‌ ಟಿಕೆಟ್‌ ದರ ಏರಿಕೆ ಮೂಲಕ ಜನರ ಮೇಲೆ ಹೊರೆ ಹೇರಲಾಗುತ್ತಿದೆ. ಉಚಿತ ಗ್ಯಾರಂಟಿಗಾಗಿ ಜನರ ಮೇಲೆ ಹೊರೆ ಹಾಕುವುದು ಸರಿಯಲ್ಲ. ಇದಕ್ಕೆ ಬೇರೆ ಯಾವುದೇ ಕಾರಣವಿಲ್ಲ. ಮೊದಲಿಗೆ ಉಚಿತ ಎಂದು ಹೇಳಿ ನಂತರ ಜನರಿಂದ ಲೂಟಿ ಮಾಡಲಾಗುತ್ತಿದೆ ಎಂದು ಕಿಡಿಕಾರಿದರು.

ಕೋಲಾರದಲ್ಲಿ ಒಂದು ಆಡಿಯೋ ಬಂದಿದ್ದು, ಜಿಲ್ಲಾಧಿಕಾರಿ ಕಚೇರಿಯಿಂದಲೇ ಗುತ್ತಿಗೆದಾರರಿಂದ ವಸೂಲಿ ಮಾಡಲಾಗುತ್ತಿದೆ. ಹಾಲಿನ ದರ ಹೆಚ್ಚಳ ಮಾಡಬಾರದು ಎಂದು ನಾವು ಆಗ್ರಹ ಮಾಡಿದ್ದೆವು. ರೈತರಿಗೆ 8 ರೂ. ಪ್ರೋತ್ಸಾಹಧನ ನೀಡಲಾಗುವುದೆಂದು ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ ಹೇಳಿತ್ತು. ಮಾಜಿ ಸಿಎಂ ಸಿದ್ದರಾಮಯ್ಯ ಈ ಭರವಸೆ ನೀಡಿ ಈಗ ನನ್ನ ಮಗನನ್ನು ನೋಡಿಕೊಳ್ಳಿ ಎಂದು ಬೇಡುತ್ತಿದ್ದಾರೆ. ಮುಂದಿನ ಬಜೆಟ್‌ 2 ಲಕ್ಷ ಕೋಟಿ ರೂ. ಸಾಲ ಮಾಡುವ ಸ್ಥಿತಿ ಬರಲಿದೆ. ಕಾಂಗ್ರೆಸ್‌ ತೊಲಗಿದರೆ ಮಾತ್ರ ಜನರಿಗೆ ನೆಮ್ಮದಿ ಎಂದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular