ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ(ಜಿಬಿಎ) 369 ವಾರ್ಡ್ ಗಳ ಚುನಾವಣೆಯಲ್ಲಿ ಸ್ಪರ್ಧಿಸುವ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಸೋಮವಾರದಿಂದ ಅರ್ಜಿ ಸ್ವೀಕಾರ ಪ್ರಕ್ರಿಯೆ ಆರಂಭವಾಗಲಿದೆ ಎಂದು ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ದೆಹಲಿ ಕರ್ನಾಟಕ ಭವನದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್, ಅರ್ಜಿ ಸಲ್ಲಿಸಲು ಸಾಮಾನ್ಯ ವರ್ಗದವರಿಗೆ 50,000 ರೂ., ಮಹಿಳೆಯರು ಹಾಗೂ ಪರಿಶಿಷ್ಟ ಸಮುದಾಯದವರಿಗೆ 25,000 ರೂ. ನಿಗದಿಪಡಿಸಲಾಗಿದೆ. ಆನ್ಲೈನ್ ನಲ್ಲಿ ಅರ್ಜಿ ಹಾಕಲು ಅವಕಾಶ ಕಲ್ಪಿಸಲಾಗಿದೆ. ಅರ್ಜಿಯೊಂದಿಗೆ ಪಡೆಯುವ ಹಣವನ್ನು ಪಕ್ಷದ ಕಟ್ಟಡ ನಿಧಿಗೆ ಬಳಕೆ ಮಾಡಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.

