HomeKarnatakaದಿಲ್ಲಿಯ ಜಂತರ್ ಮಂತರ್ ನಲ್ಲಿ 'ಕಾಂಗ್ರೆಸ್' ಪ್ರತಿಭಟನೆ : ಎರಡು ತಲೆ ರಾಜಕಾರಣ ಬೆತ್ತಲಾಗಿದೆ ಎಂದ...

ದಿಲ್ಲಿಯ ಜಂತರ್ ಮಂತರ್ ನಲ್ಲಿ ‘ಕಾಂಗ್ರೆಸ್’ ಪ್ರತಿಭಟನೆ : ಎರಡು ತಲೆ ರಾಜಕಾರಣ ಬೆತ್ತಲಾಗಿದೆ ಎಂದ HDK

ನವದೆಹಲಿ : ದೆಹಲಿಯ ಜಂತರ್ ಮಂತರ್ ನಲ್ಲಿ ರಾಜ್ಯ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದ್ದು, ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮೂಲಕ ಟಾಂಗ್ ನೀಡಿದ್ದಾರೆ. ತೆರಿಗೆ ಪಾಲು, ಅನುದಾನದಲ್ಲಿ ಅನ್ಯಾಯವಾಗಿದೆ ಎಂದು ದಿಲ್ಲಿಗೆ ಯಾತ್ರೆ ಹೊರಟಿರುವ ಕಾಂಗ್ರೆಸ್ ಪಕ್ಷದ ಎರಡು ತಲೆ ರಾಜಕಾರಣ ಈಗ ಬೆತ್ತಲಾಗಿದೆ. ಅದರ ವರಸೆ ಹೇಗಿದೆ ಎಂದರೆ., ಕರ್ನಾಟಕಕ್ಕೆ ಒಂದು ನೀತಿ  ಎಂದು ಹೆಚ್ಡಿಕೆ ಕಿಡಿಕಾರಿದ್ದಾರೆ.

ರಾವಣ_ತಲೆಗಳ_ಕಾಂಗ್ರೆಸ್_ರಾಜಕಾರಣ ಕೇರಳದ ಸಿಎಂ ಪಿಣರಾಯಿ ವಿಜಯನ್ ಅವರು, “ನಮ್ಮ ರಾಜ್ಯಕ್ಕೆ ತೆರಿಗೆ ಪಾಲು, ಅನುದಾನದಲ್ಲಿ ಅನ್ಯಾಯ ಆಗಿದೆ. ಅದಕ್ಕೆ ಕೇಂದ್ರದ ವಿರುದ್ಧ ದನಿ ಎತ್ತೋಣ ಬನ್ನಿ, ಸಹಕಾರ ನೀಡಿ” ಎಂದು ಕರೆದರೆ, ಅದಕ್ಕೆ ಕೇರಳ ಕಾಂಗ್ರೆಸ್ಸಿಗರು ಕೊಟ್ಟ ಉತ್ತರ ಹೀಗಿತ್ತು; “ಜನರ ಹಣವನ್ನು ನೀವು ಅನಗತ್ಯ ವೆಚ್ಚಗಳಿಗೆ ಪೋಲು ಮಾಡುತ್ತಿದ್ದೀರಿ, ನಾವು ಬರಲ್ಲ” ಎಂದಿದ್ದಾರೆ!! 2/5 ವಿಜಯನ್ ಅವರು ಕರೆದಿದ್ದ ಸರ್ವಪಕ್ಷ ಸಭೆಗೂ ಅಸಹಕಾರ ತೋರಿರುವ ಕಾಂಗ್ರೆಸ್ಸಿಗರು, ಕೇಂದ್ರ ಸರಕಾರದ ವಿರುದ್ಧ ಕೇರಳ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸುವಾಗಲೂ ಗೈರುಹಾಜರಾಗಿದ್ದಾರೆ ಮತ್ತು ಕಲಾಪವನ್ನೇ ಬಹಿಷ್ಕರಿಸಿದ್ದಾರೆ. ಅಷ್ಟೇ ಅಲ್ಲ; ಫೆಬ್ರುವರಿ 8ನೇ ತಾರೀಖು ದಿಲ್ಲಿಯಲ್ಲಿ ವಿಜಯನ್ ಅವರು ಹಮ್ಮಿಕೊಂಡಿರುವ ಪ್ರತಿಭಟನೆಯನ್ನೂ ಕೇರಳ ಕಾಂಗ್ರೆಸ್ಸಿಗರು ಬಹಿಷ್ಕರಿಸಿದ್ದಾರೆ!! 3/5 ಕರ್ನಾಟಕದ ಕಾಂಗ್ರೆಸ್, ಕೇರಳಕ್ಕೆ ತದ್ವಿರುದ್ಧ ದಿಕ್ಕಿನಲ್ಲಿದೆ. ಒಂದೆಡೆ ಬಿಜೆಪಿ ಸಂಸದರು ಶೋ ಪೀಸುಗಳು, ಗಂಡಸ್ತನ ಇಲ್ಲದವರು ಎಂದು ಕಾಂಗ್ರೆಸ್ ನಾಯಕರು ನಾಲಿಗೆ ಜಾರಿ ಬಿಡುತ್ತಿದ್ದಾರೆ.ಈಗ ನೋಡಿದರೆ, “ಪ್ರತಿಭಟನೆಗೆ ಬನ್ನಿ. ನಿಮ್ಮ ಸಹಕಾರವೂ ಇರಲಿ..” ಎಂದು ಆ ಪಕ್ಷದ ಸಂಸದರನ್ನು ಅದೇ ನಾಲಿಗೆಯಿಂದಲೇ ಕರೆಯುತ್ತಿದ್ದಾರೆ. ಜೆಡಿಎಸ್ ಸಂಸದರಿಗೂ ಪತ್ರ ಬರೆದಿದ್ದಾರೆ. ಇದೆಂಥಾ ವೈರುಧ್ಯ? ಇದೆಂಥಾ ಚೋದ್ಯ?  ಎಂದು ಹೆಚ್ಡಿಕೆ ಕಿಡಿಕಾರಿದ್ದಾರೆ.

ಕೇರಳದ LDF ಸರಕಾರ ಜನರ ತೆರಿಗೆ ಹಣ ಪೋಲು ಮಾಡುತ್ತಿದೆ ಎಂದಾದರೆ, ಕರ್ನಾಟಕದಲ್ಲಿ ಗ್ಯಾರಂಟಿ ಹೆಸರಿನಲ್ಲಿ ಕಾಂಗ್ರೆಸ್ ಮಾಡುತ್ತಿರುವುದೇನು? ಯೋಜನೆಗಳ ಹೆಸರಿನಲ್ಲಿ ಕೊಳ್ಳೆ ಹೊಡೆಯುತ್ತಿರುವುದೇನು? ಕೇರಳದಲ್ಲಿ ಅಸಹಕಾರ! ಕರ್ನಾಟಕದಲ್ಲಿ ಸಹಕಾರ!! ಇದೆಂಥಾ ನೀತಿ? ಎರಡು ತಲೆಗಳು ಮಾತ್ರವಲ್ಲ, ರಾವಣ ತಲೆಗಳ ಪಕ್ಷಕ್ಕೆ ಮೈಯ್ಯೆಲ್ಲಾ ರಾಜಕೀಯವೇ ತುಂಬಿದೆ. ಅದೂ ಸ್ವಾರ್ಥ ರಾಜಕೀಯ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮೂಲಕ ಟಾಂಗ್ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular