‘ಭ್ರಷ್ಟಾಚಾರ ನಿಲ್ಲಿಸಿ ಬೆಂಗಳೂರು ಉಳಿಸಿ’ ಘೋಷಣೆಯಡಿ ಬೆಂಗಳೂರಿನಲ್ಲಿಂದು 300 ಕಡೆ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು: ಬೆಂಗಳೂರಿನಲ್ಲಿ ಇಂದು ಕಾಂಗ್ರೆಸ್ ಪಕ್ಷದಿಂದ ಸರ್ಕಾರದ ವಿರುದ್ಧ ಧರಣಿ ಹಮ್ಮಿಕೊಳ್ಳಲಾಗಿದೆ. ‘ಭ್ರಷ್ಟಾಚಾರ ನಿಲ್ಲಿಸಿ ಬೆಂಗಳೂರು ಉಳಿಸಿ’ ಘೋಷಣೆಯಡಿ ಬೆಂಗಳೂರಿನ 300ಕ್ಕೂ ಹೆಚ್ಚು ಸ್ಥಳಗಳಲ್ಲಿ ಕಾಂಗ್ರೆಸ್ ನಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ವಿವಿಧಡೆ ಕಾಂಗ್ರೆಸ್ ಪ್ರತಿಭಟನೆ ಹಮ್ಮಿಕೊಂಡಿದೆ. ಟ್ರಿನಿಟಿ ವೃತ್ತದಲ್ಲಿ ನಡೆಯುವ ಧರಣಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭಾಗಿಯಾಗಲಿದ್ದಾರೆ.

ಕೆಆರ್ ಮಾರ್ಕೆಟ್, ಪೀಣ್ಯ, ಹೆಬ್ಬಾಳ, ಆನಂದರಾವ್ ಸರ್ಕಲ್, ಮಂತ್ರಿ ಮಾಲ್, ಮೆಜೆಸ್ಟಿಕ್, ಸಿಲ್ಕ್ ಬೋರ್ಡ್, ಲಾಲ್ಬಾಗ್ ಸೇರಿದಂತೆ ಬೆಂಗಳೂರು ನಗರದ 250 ಸಿಗ್ನಲ್ ಗಳು, 26 ಫ್ಲೈ ಓವರ್ ಗಳು, 25 ಮೆಟ್ರೋ ಸ್ಟೇಷನ್ ಬಳಿ ಕಾಂಗ್ರೆಸ್ ಕಾರ್ಯಕರ್ತರು ಧರಣಿ ನಡೆಸಲಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read