HomeLatest NewsBREAKING: ಬಿಜೆಪಿ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರಿಂದ ಮುತ್ತಿಗೆ ಯತ್ನ

BREAKING: ಬಿಜೆಪಿ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರಿಂದ ಮುತ್ತಿಗೆ ಯತ್ನ

ಬೆಂಗಳೂರು: ತುರ್ತು ಪರಿಸ್ಥಿತಿ ಹೆಸರಲ್ಲಿ ಮಾಜಿ ಪ್ರಧಾನಿ ಇಂಧಿರಾ ಗಾಂಧಿ ಅವರಿಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ವಿರುದ್ಧ ಸಿಡಿದೆದಿದ್ದು, ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ವಿರುದ್ಧ ಪ್ರತಿಭಟನೆ ತೀವ್ರಗೊಳಿಸಿರುವ ಯುವ ಕಾಂಗ್ರೆಸ್ ಕಾರ್ಯಕರ್ತರು, ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ವಿರುದ್ಧ ಧಿಕ್ಕಾರ ಕೂಗಿ, ರಾಜ್ಯ ಹಾಗೂ ಕೇಂದ್ರ ಬಿಜೆಪಿ ನಾಯಕರ ವಿರುದ್ಧ ಹರಿಹಾಯ್ದರು.

ಪ್ರತಿಭಟನೆ ತೀವ್ರ ಸ್ವರೂಪ ಪಡೆಯುತ್ತಿದ್ದಂತೆ ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರನ್ನು ನಿಯಂತ್ರಿಸಲು ಹರಸಾಹಸಪಟ್ಟಿದ್ದಾರೆ. ಈ ವೇಳೆ ಬಿಜೆಪಿ ಕಾರ್ಯಕರ್ತರು ಸ್ಥಳಕ್ಕಾಗಮಿಸಿ ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ಪ್ರಾರಂಭಿಸಿದ್ದಾರೆ. ಮಲ್ಲೇಶ್ವರಂ ಬಿಜೆಪಿ ಕಚೇರಿ ಮುಂದೆ ಹೈಡ್ರಾಮಾ ಶುರುವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular