BREAKING : ರಾಜ್ಯಪಾಲರ ವಿರುದ್ಧ ರಾಜ್ಯಾದ್ಯಂತ ‘ಕಾಂಗ್ರೆಸ್’ ಪ್ರತಿಭಟನೆ, ಟೈರ್ ಗೆ ಬೆಂಕಿ ಹಚ್ಚಿ ಕಲ್ಲುತೂರಾಟ.!

ಬೆಂಗಳೂರು : ‘ ಸಿಎಂ ಸಿದ್ದರಾಮಯ್ಯ’ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ.

ಬೆಂಗಳೂರು, ಮಂಗಳೂರು , ಚಿಕ್ಕಬಳ್ಳಾಪುರ, ಹಾವೇರಿ, ದಾವಣಗೆರೆ, ಮೈಸೂರು ಸೇರಿ ಹಲವು ಕಡೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ರಾಜ್ಯಪಾಲ ಗೆಹ್ಲೋಟ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರ ಹಾಕುತ್ತಿದ್ದಾರೆ.ಮಂಗಳೂರಿನಲ್ಲಿ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದು, ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ಹಲವು ಕಡೆ ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಲಾಗಿದೆ.

ಇನ್ನೂ ಬೆಂಗಳೂರಿನ ಪ್ರೀಡಂ ಪಾರ್ಕ್ ನಲ್ಲಿ ಕೂಡ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು,, ಘೋಷಣೆ ಕೂಗಿ ರಾಜ್ಯಪಾಲರ ನಡೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

https://twitter.com/INCKarnataka/status/1824817554801443189

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read