HomeLatest NewsBIG NEWS : ನಾಳೆ ಬೆಂಗಳೂರಿನಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಪ್ರತಿಭಟನೆ :...

BIG NEWS : ನಾಳೆ ಬೆಂಗಳೂರಿನಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಪ್ರತಿಭಟನೆ : ‘ವೋಟ್ ಅಧಿಕಾರ್ ರ್ಯಾಲಿ’.!

ಬೆಂಗಳೂರು : ಬೆಂಗಳೂರಿನಲ್ಲಿ ನಾಳೆ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಪ್ರತಿಭಟನಾ ಸಮಾವೇಶ ನಡೆಸಲಿದೆ. ಈ ಸಮಾವೇಶಕ್ಕೆ ವೋಟ್ ಅಧಿಕಾರ್ ರ್ಯಾಲಿ ಎಂದು ಹೆಸರಿಸಲಾಗಿದೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ರಾಹುಲ್ ಗಾಂಧಿ ತೀವ್ರ ಆರೋಪ ಮಾಡಿದ್ದಾರೆ. ಈ ಸಂಬಂಧ ರಾಹುಲ್ ಗಾಂಧಿ ನೇತೃತ್ವದಲ್ಲಿ ಆ.8 ರಂದು ಫ್ರೀಡಂ ಪಾರ್ಕ್ ನಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಈ ಹಿಂದೆ ಆ.5 ರಂದು ನಿಗದಿಯಾಗಿದ್ದ ಪ್ರತಿಭಟನೆಯನ್ನು ನಾಳೆಗೆ ಮುಂದೂಡಲಾಗಿದೆ.

ಭಾರತದಲ್ಲಿ ಚುನಾವಣೆಯನ್ನೇ ಕದಿಯಲಾಗುತ್ತಿದೆ ಕರ್ನಾಟಕದ ಲೋಕಸಭಾ ಕ್ಷೇತ್ರವೊಂದರಲ್ಲಿ ಮತಗಳ್ಳತನ ನಡೆದಿದೆ ಎಂದು ಆರೋಪಿಸಿದ್ದ ರಾಹುಲ್ ಗಾಂಧಿ ಇದರ ವಿರುದ್ಧ ಹೋರಾಟಕ್ಕೆ ಬೆಂಗಳೂರಿನಿಂದಲೇ ಚಾಲನೆ ನೀಡಲಿದ್ದಾರೆ. ಪ್ರತಿಭಟನಾ ಸಮಾವೇಶದಲ್ಲಿ ಪ್ರತಿ ಕ್ಷೇತ್ರದಿಂದ 50 ಮಂದಿ ಕರೆತರಬೇಕು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಪ್ರಮುಖ ನಾಯಕರು ಕಡ್ಡಾಯವಾಗಿ ಹಾಜರಿರಬೇಕು ಎಂದು ಸೂಚನೆ ನೀಡಲಾಗಿದೆ .
ಪ್ರತಿಭಟನಾ ಸಮಾವೇಶದಲ್ಲಿ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಮತ್ತಿತರರು ಕಾಂಗ್ರೆಸ್ ನಾಯಕರು ಭಾಗಿಯಾಗಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಲೋಕಸಭಾ ಚುನಾವಣೆಯಲ್ಲಿ ಮತ ಕಳ್ಳತನದ ವಿರುದ್ಧ ಲೋಕಸಭಾ ವಿರೋಧ ಪಕ್ಷದ ನಾಯಕರಾದ ಶ್ರೀ ರಾಹುಲ್ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಆ.8 ರಂದು ಫ್ರೀಡಂ ಪಾರ್ಕ್’ನಲ್ಲಿ ನಡೆಯಲಿರುವ ಪ್ರತಿಭಟನಾ ಸಭೆಗೆ ಸಂಬಂಧಿಸಿದಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ರಣದೀಪ್ ಸಿಂಗ್ ಸುರ್ಜೆವಾಲಾ, ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ಉಪಸ್ಥಿತಿಯಲ್ಲಿ ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಸಿ, ಚುನಾವಣೆ ಅಕ್ರಮಗಳ ಬಗ್ಗೆ ರಾಷ್ಟ್ರೀಯ ಮಟ್ಟದಲ್ಲಿ ಗಮನಸೆಳೆಯಲು ಹೋರಾಟದ ರೂಪುರೇಷೆ ಸಿದ್ಧಪಡಿಸುವ ಕುರಿತು ನಿರ್ಧರಿಸಲಾಯಿತು ಎಂದು ಡಿಸಿಎಂ ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular