ಸರ್ಕಾರಿ ನೌಕರರಿಗೆ ಒಪಿಎಸ್ ಮರು ಜಾರಿ ಘೋಷಣೆ ಸೇರಿ ಹಲವು ಯೋಜನೆ, ಕೊಡುಗೆ ಒಳಗೊಂಡ ಕಾಂಗ್ರೆಸ್ ಪ್ರಣಾಳಿಕೆ ಇಂದು ಬಿಡುಗಡೆ

ಬೆಂಗಳೂರು: 200 ಯುನಿಟ್ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ, ಪ್ರತಿ ಮನೆಯ ಯಜಮಾನಿಗೆ 2 ಸಾವಿರ ರೂಪಾಯಿ ಮಾಸಿಕ ಸಹಾಯಧನ ನೀಡುವ ಗೃಹ ಲಕ್ಷ್ಮಿ, ಪದವೀಧರರಿಗೆ ಹಾಗೂ ಡಿಪ್ಲೋಮೋ ಪದವೀಧರರಿಗೆ ಮಾಸಿಕ ನಿರುದ್ಯೋಗ ಪತ್ತೆ ನೀಡುವ ಯುವನಿಧಿ, ಪ್ರತಿ ತಿಂಗಳು 10 ಕೆಜಿ ಅಕ್ಕಿ ನೀಡುವ ಅನ್ನ ಭಾಗ್ಯ, ಮಹಿಳೆಯರಿಗೆ ಉಚಿತ ಬಸ್ ಪಾಸ್ ನೀಡುವ ಸಖಿ ಸೇರಿದಂತೆ ಐದು ಗ್ಯಾರಂಟಿ ಯೋಜನೆಗಳನ್ನು ಪ್ರಕಟಿಸಿರುವ ಕಾಂಗ್ರೆಸ್ ವಿಧಾನಸಭೆ ಚುನಾವಣೆಗೆ ಮತ್ತಷ್ಟು ಕೊಡುಗೆ, ಯೋಜನೆ ಒಳಗೊಂಡ ಪ್ರಣಾಳಿಕೆಯನ್ನು ಇಂದು ಬಿಡುಗಡೆ ಮಾಡಲಿದೆ.

ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಲಾಗುವುದು. ರಾಜ್ಯ ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ ಮರುಜರಿ ಮಾಡುವ ಬಗ್ಗೆ ಪ್ರಣಾಳಿಕೆಯಲ್ಲಿ ಘೋಷಿಸುವ ಸಾಧ್ಯತೆ ಇದೆ. ಇದರೊಂದಿಗೆ ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ, ಮಲೆನಾಡು, ಬೆಂಗಳೂರು ನಗರ ಹಾಗೂ ಕರಾವಳಿ ಪ್ರದೇಶಗಳಿಗೆ ಪ್ರತ್ಯೇಕ ಪ್ರಣಾಳಿಕೆ ನೀಡಲಾಗುವುದು ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read