HomeKarnatakaಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಸಜ್ಜು: ಮಂಗಳೂರಲ್ಲಿ ಇಂದು ರಾಜ್ಯಮಟ್ಟದ ಬೃಹತ್ ಸಮಾವೇಶ

ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಸಜ್ಜು: ಮಂಗಳೂರಲ್ಲಿ ಇಂದು ರಾಜ್ಯಮಟ್ಟದ ಬೃಹತ್ ಸಮಾವೇಶ

ಮಂಗಳೂರು: ಮಂಗಳೂರಿನಲ್ಲಿ ಇಂದು ಕಾಂಗ್ರೆಸ್ ಕಾರ್ಯಕರ್ತರ ರಾಜ್ಯಮಟ್ಟದ ಸಮಾವೇಶ ನಡೆಯಲಿದೆ. ಮಂಗಳೂರಿನ ಆಡ್ಯಾರ್ ನಲ್ಲಿರುವ ಸಹ್ಯಾದ್ರಿ ಕಾಲೇಜು ಆವರಣದಲ್ಲಿ ಸಮಾವೇಶ ಆಯೋಜಿಸಲಾಗಿದೆ.

ಲೋಕಸಭೆ ಚುನಾವಣೆಗೆ ಕಾರ್ಯಕರ್ತರನ್ನು ಸಜ್ಜುಗೊಳಿಸಲು ಎಐಸಿಸಿ ಸೂಚನೆ ಮೇರೆಗೆ ರಾಜ್ಯಮಟ್ಟದ ಬೃಹತ್ ಸಮಾವೇಶ ಆಯೋಜಿಸಲಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಎಲ್ಲಾ ಸಚಿವರು, ಸಂಸದರು, ಶಾಸಕರು, ಕೆಪಿಸಿಸಿ ಪದಾಧಿಕಾರಿಗಳು, ಲೋಕಸಭೆ ಚುನಾವಣೆಯ ಟಿಕೆಟ್ ಆಕಾಂಕ್ಷಿಗಳು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಮುಂಚೂಣಿ ಘಟಕಗಳು, ಎಲ್ಲಾ ಹಂತದ ಅಧ್ಯಕ್ಷರು ಕಾರ್ಯಕರ್ತರ ಸಮಾವೇಶದಲ್ಲಿ ಕಡ್ಡಾಯವಾಗಿ ಭಾಗವಹಿಸುವಂತೆ ಸೂಚನೆ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular