HomeKarnatakaರಾಹುಲ್ ಗಾಂಧಿ ಅನರ್ಹತೆಯನ್ನೇ ಅಸ್ತ್ರ ಮಾಡಿಕೊಳ್ಳಲು ಕಾಂಗ್ರೆಸ್ ಮಾಸ್ಟರ್ ಪ್ಲಾನ್: ತಿರುಗೇಟು ನೀಡಲು ಕೋಲಾರದಲ್ಲೇ ಸತ್ಯಮೇವ...

ರಾಹುಲ್ ಗಾಂಧಿ ಅನರ್ಹತೆಯನ್ನೇ ಅಸ್ತ್ರ ಮಾಡಿಕೊಳ್ಳಲು ಕಾಂಗ್ರೆಸ್ ಮಾಸ್ಟರ್ ಪ್ಲಾನ್: ತಿರುಗೇಟು ನೀಡಲು ಕೋಲಾರದಲ್ಲೇ ಸತ್ಯಮೇವ ಜಯತೇ ಸಮಾವೇಶ

ಬೆಂಗಳೂರು: ಕೋಲಾರದಲ್ಲಿ ಕಾಂಗ್ರೆಸ್ ಪಕ್ಷದಿಂದ ಸತ್ಯಮೇವ ಜಯತೇ ಬೃಹತ್ ಸಮಾವೇಶ ನಡೆಸಲು ಚಿಂತನೆ ನಡೆದಿದ್ದು, ಏಪ್ರಿಲ್ 5 ರಂದು ನಡೆಯುವ ಸಮಾವೇಶದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾಗವಹಿಸುವ ಸಾಧ್ಯತೆ ಇದೆ.

2019ರ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಕೋಲಾರದಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮೋದಿ ಅವರ ಕುರಿತಾಗಿ ನೀಡಿದ್ದ ಹೇಳಿಕೆಯಿಂದ ಎರಡು ವರ್ಷದ ಶಿಕ್ಷೆಗೆ ಗುರಿಯಾಗಿ ಸಂಸತ್ ಸ್ಥಾನದಿಂದ ಅನರ್ಹಗೊಂಡಿದ್ದಾರೆ. ಇದಕ್ಕೆ ತಿರುಗೇಟು ನೀಡಲು ಕೋಲಾರದಲ್ಲಿಯೇ ಕಾಂಗ್ರೆಸ್ ಸತ್ಯಮೇವ ಜಯತೇ ಬೃಹತ್ ಸಮಾವೇಶ ನಡೆಸಲು ಪ್ಲಾನ್ ಮಾಡಿಕೊಂಡಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೋಲಾರದಲ್ಲಿ ಮಾಡಿದ್ದ ಭಾಷಣದಿಂದಲೇ ಅನರ್ಹಗೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೋಲಾರ ಜಿಲ್ಲೆ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಪ್ರಚಾರ ಕೈಗೊಂಡಿದ್ದಾರೆ. ಲೋಕಸಭೆ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿರುವುದನ್ನೇ ಅಸ್ತ್ರವಾಗಿ ಬಳಸಲು ಕಾಂಗ್ರೆಸ್ ಪ್ಲಾನ್ ಮಾಡಿಕೊಂಡಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular