BIG NEWS: ಮನಮೋಹನ್ ಸಿಂಗ್ ಸ್ಮಾರಕ ನಿರ್ಮಿಸುವ ಜಾಗದಲ್ಲಿಯೇ ಅಂತ್ಯಕ್ರಿಯೆ ನೆರವೇರಿಸಲು ಪ್ರಧಾನಿಗೆ ಕಾಂಗ್ರೆಸ್ ಪತ್ರ

ನವದೆಹಲಿ: ದೆಹಲಿಯಲ್ಲಿ ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡುವಂತೆ ಪ್ರಧಾನಿ ಮೋದಿಯವರಿಗೆ ರಾಜ್ಯಸಭೆ ವಿಪಕ್ಷ ನಾಯಕ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆದಿದ್ದಾರೆ.

ಸ್ಮಾರಕ ನಿರ್ಮಿಸುವ ಜಾಗದಲ್ಲಿಯೇ ಅಂತ್ಯಕ್ರಿಯೆ ನೆರವೇರಿಸಬೇಕೆಂದು ಮನವಿ ಮಾಡಿದ್ದಾರೆ. ಪವಿತ್ರ ಸ್ಥಳದಲ್ಲಿ ಸಿಂಗ್ ಅವರ ಅಂತ್ಯಕ್ರಿಯೆ ನಡೆಸಬೇಕು. ಅಂತ್ಯಕ್ರಿಯೆ ಮಾಡುವ ಸ್ಥಳ ಸ್ಮಾರಕ ನಿರ್ಮಾಣ ಮಾಡುವಂತಿರಬೇಕು ಪ್ರಧಾನಿ ಮೋದಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.

ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ನಡೆಯುವ ಸ್ಥಳದಲ್ಲಿಯೇ ಅವರ ಸ್ಮಾರಕವನ್ನು ನಿರ್ಮಿಸುವುದರ ಸಾಧ್ಯತೆ ಬಗ್ಗೆ ಪರಿಶೀಲಿಸುವ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಖರ್ಗೆ ಮಾತನಾಡಿದ್ದಾರೆ ಎಂದು ಪಕ್ಷವು ತಿಳಿಸಿದೆ.

ಇದು ಮಾಜಿ ಪ್ರಧಾನ ಮಂತ್ರಿಗಳ ಅಂತ್ಯಕ್ರಿಯೆಯ ಸ್ಥಳದಲ್ಲಿ ಅವರ ಸ್ಮಾರಕಗಳನ್ನು ಹೊಂದಿರುವ ಸಂಪ್ರದಾಯಕ್ಕೆ ಅನುಗುಣವಾಗಿದೆ. ಡಾ. ಮನಮೋಹನ್ ಸಿಂಗ್ ಅವರ ಸ್ಥಾನಮಾನಕ್ಕೆ ಅನುಗುಣವಾಗಿ ಅವರ ಸ್ಮಾರಕವನ್ನು ನಿರ್ಮಿಸಬಹುದಾದ ಸ್ಥಳದಲ್ಲಿ ಅಂತ್ಯಕ್ರಿಯೆ ನೆರವೇರಿಸಲು ಪತ್ರದಲ್ಲಿ ತಿಳಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read