HomeKarnatakaಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ ಮುಖ್ಯ ಮಾಹಿತಿ: ಅಭ್ಯರ್ಥಿಗಳ ಆಯ್ಕೆಗೆ ಯಾವೆಲ್ಲಾ ಮಾನದಂಡ ಗೊತ್ತಾ…?

ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ ಮುಖ್ಯ ಮಾಹಿತಿ: ಅಭ್ಯರ್ಥಿಗಳ ಆಯ್ಕೆಗೆ ಯಾವೆಲ್ಲಾ ಮಾನದಂಡ ಗೊತ್ತಾ…?

ಬೆಂಗಳೂರು: ನಾಳೆ ಕಾಂಗ್ರೆಸ್ ಚುನಾವಣೆ ಸಮಿತಿ ಸಭೆ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಕಾಂಗ್ರೆಸ್ ನಾಯಕರ ಸಭೆ ನಡೆದಿದೆ.

ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಸಿ.ಎಲ್.ಪಿ. ನಾಯಕ ಸಿದ್ದರಾಮಯ್ಯ ಭಾಗಿಯಾಗಿದ್ದಾರೆ. ನಾಳೆ ಸಭೆಯಲ್ಲಿ ಪ್ರಸ್ತಾಪಿಸಬೇಕಾದ ವಿಚಾರಗಳ ಬಗ್ಗೆ ಮಾತುಕತೆ ನಡೆಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸುವ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ. ಟಿಕೆಟ್ ನೀಡಲು ಯಾವೆಲ್ಲಾ ಮಾನದಂಡ ಅನುಸರಿಸಬೇಕು? ಜಿಲ್ಲಾ ಚುನಾವಣಾ ಸಮಿತಿ ವರದಿಗೆ ಹೆಚ್ಚಿನ ಮಾನ್ಯತೆ ನೀಡಬೇಕಾ? ಕೆಪಿಸಿಸಿ ಕಾರ್ಯಾಧ್ಯಕ್ಷರು ನೀಡಿರುವ ವರದಿಗೆ ಆದ್ಯತೆ ನೀಡಬೇಕಾ? ಸಮೀಕ್ಷೆ ವರದಿ ಬಗ್ಗೆಯ ಕಾಂಗ್ರೆಸ್ ನಾಯಕರು ಸಮಾಲೋಚನೆ ನಡೆಸಿದ್ದಾರೆ. ಸಿದ್ದರಾಮಯ್ಯ, ಡಿಕೆಶಿ, ಕೆಪಿಸಿಸಿ ನಡೆಸಿರುವ ಸರ್ವೆ ಬಗ್ಗೆಯೂ ಚರ್ಚೆ ನಡೆಸಲಾಗುವುದು ಎನ್ನಲಾಗಿದೆ.

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಘೋಷಣೆಯ ನಂತರ ಮುಂದೆ ಯಾವ ಯೋಜನೆ ಘೋಷಣೆ ಮಾಡಬೇಕೆಂಬ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular