HomeKarnatakaಲಿಂಗಾಯತರಿಗೆ 75 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಟಿಕೆಟ್ ಗೆ ಬೇಡಿಕೆ: ಎಐಸಿಸಿಗೆ ಗೆದ್ದೇ ಗೆಲ್ಲುವ ಅಭ್ಯರ್ಥಿಗಳ ಪಟ್ಟಿ...

ಲಿಂಗಾಯತರಿಗೆ 75 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಟಿಕೆಟ್ ಗೆ ಬೇಡಿಕೆ: ಎಐಸಿಸಿಗೆ ಗೆದ್ದೇ ಗೆಲ್ಲುವ ಅಭ್ಯರ್ಥಿಗಳ ಪಟ್ಟಿ ಕೊಟ್ಟ ಮುಖಂಡರು

ದಾವಣಗೆರೆ: ವಿಧಾನಸಭೆ ಚುನಾವಣೆಯಲ್ಲಿ ವೀರಶೈವ ಲಿಂಗಾಯತ ಸಮುದಾಯದವರಿಗೆ ಆಯ್ದ 75 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲು ಟಿಕೆಟ್ ಕೊಡಬೇಕೆಂದು ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಒತ್ತಾಯಿಸಿದ್ದಾರೆ.

ಬೆಂಗಳೂರಿನಲ್ಲಿ ಎಐಸಿಸಿ ಸ್ಕ್ರೀನಿಂಗ್ ಕಮಿಟಿ ಅಧ್ಯಕ್ಷ ಮೋಹನ್ ಪ್ರಕಾಶ್ ಅವರನ್ನು ಶಾಮನೂರು ಶಿವಶಂಕರಪ್ಪ ನೇತೃತ್ವದಲ್ಲಿ ಭೇಟಿ ಮಾಡಿದ ವೀರಶೈವ ಲಿಂಗಾಯತ ಮುಖಂಡರು ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ 75 ಕ್ಷೇತ್ರಗಳಲ್ಲಿ ಗೆದ್ದೇ ಗೆಲ್ಲುವ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿ ನೀಡಿ ಟಿಕೆಟ್ ಕೊಡಬೇಕೆಂದು ಆಗ್ರಹಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಾಮನೂರು ಶಿವಶಂಕರಪ್ಪ ಅವರ ಬೆಂಗಳೂರಿನ ನಿವಾಸದಲ್ಲಿ ವೀರಶೈವ ಲಿಂಗಾಯತ ಸಮಾಜದ ಕಾಂಗ್ರೆಸ್ ನಾಯಕರು ಎರಡು ಸುತ್ತಿನ ಸಭೆ ನಡೆಸಿ ಸಭೆಯಲ್ಲಿ ವ್ಯಕ್ತವಾದ ಅಭಿಪ್ರಾಯಗಳ ಬಗ್ಗೆ ಚರ್ಚೆ ನಡೆಸಿ 75 ಕ್ಷೇತ್ರಗಳಲ್ಲಿ ಖಚಿತವಾಗಿ ಗೆಲ್ಲುವ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿ ಸಿದ್ಧಪಡಿಸಿ ನೀಡಿದ್ದಾರೆ.

ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಕೆಪಿಸಿಸಿ ಮಾಜಿ ಅಧ್ಯಕ್ಷ ಅಲ್ಲಂ ವೀರಭದ್ರಪ್ಪ, ಮಾಜಿ ಸಚಿವ ವಿನಯ ಕುಲಕರ್ಣಿ, ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ಸೇರಿದಂತೆ ಹಲವರು ಇದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular