ಬೆಂಗಳೂರು : ಬಿಜೆಪಿಯಲ್ಲಿ ಸೋಲಿನ ಅವಲೋಕನ ಚೆನ್ನಾಗಿಯೇ ನಡೆಯುತ್ತಿದೆ ಎಂದು ಕಾಂಗ್ರೆಸ್ ಟ್ವೀಟ್ ನಲ್ಲಿ ಲೇವಡಿ ಮಾಡಿದೆ.
ಬಿಜೆಪಿಯಲ್ಲಿ ಸೋಲಿನ ಅವಲೋಕನ ಚೆನ್ನಾಗಿಯೇ ನಡೆಯುತ್ತಿದೆ! ಬೊಮ್ಮಾಯಿ ಹಾಗೂ ಬಿಎಸ್ವೈ ಅವರನ್ನು ಪರೋಕ್ಷವಾಗಿ ಟಾರ್ಗೆಟ್ ಮಾಡುತ್ತಿರುವ ಪ್ರತಾಪ್ ಸಿಂಹ , ಸಿಟಿ ರವಿ ಅವರ ಹೇಳಿಕೆಗಳ ಹಿಂದಿರುವುದು ಮತ್ತದೇ ಜೋಶಿ, ಸಂತೋಷ್ ಜೋಡಿ. ಸೋಲಿನ ನಂತರ ನಾಪತ್ತೆಯಾಗಿರುವ ಈ ಜೋಡಿ ತೆರೆಯ ಹಿಂದೆ ನಿಂತು ಕಲ್ಲು ಹೊಡೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಟ್ವೀಟ್ ನಲ್ಲಿ ಲೇವಡಿ ಮಾಡಿದೆ.
ರಿಟೈರ್ಡ್ ಹರ್ಟ್ ಆಗಿರುವ ಸಿಟಿ ರವಿಈಗ ಸ್ವಪಕ್ಷದ ವಿರುದ್ಧವೇ ತಿರುಗಿ ಬಿದ್ದಿದ್ದಾರೆ, ಅವರ ಅರಣ್ಯ ರೋಧನಕ್ಕೆ ಪ್ರತಾಪ್ ದನಿ ಜೋಡಿಸಿದ್ದಾರೆ. ಇಬ್ಬರಿಗೂ ದಮ್ಮು ತಾಕತ್ತು ಇದ್ದರೆ ಅಡ್ಜಸ್ಟಮೆಂಟ್ ಮಾಡಿಕೊಂಡ ತಮ್ಮ ಪಕ್ಷದ ನಾಯಕರ ಹೆಸರು ಹೇಳಿ ಆರೋಪಿಸಲಿ. ಅಂದಹಾಗೆ ಬಿಜೆಪಿಯೊಂದಿಗೆ ಅಡ್ಜಸ್ಟ್ ಮಾಡಿಕೊಂಡಿದ್ದ ಕುಮಾರಸ್ವಾಮಿ ತಲೆ ಸವರಿಕೊಂಡು ನಗುತ್ತಿದ್ದಾರಂತೆ ಅಲ್ಲವೇ ಎಂದು ಬಿಜೆಪಿ ನಾಯಕರನ್ನು ಕಾಂಗ್ರೆಸ್ ಕಾಲೆಳೆದಿದೆ.
ಬಿಜೆಪಿಯಲ್ಲಿ ಸೋಲಿನ ಅವಲೋಕನ ಚೆನ್ನಾಗಿಯೇ ನಡೆಯುತ್ತಿದೆ!
ಬೊಮ್ಮಾಯಿ ಹಾಗೂ @BSYBJP ಅವರನ್ನು ಪರೋಕ್ಷವಾಗಿ ಟಾರ್ಗೆಟ್ ಮಾಡುತ್ತಿರುವ @mepratap @CTRavi_BJP ಅವರ ಹೇಳಿಕೆಗಳ ಹಿಂದಿರುವುದು ಮತ್ತದೇ ಜೋಶಿ, ಸಂತೋಷ್ ಜೋಡಿ.
ಸೋಲಿನ ನಂತರ ನಾಪತ್ತೆಯಾಗಿರುವ ಈ ಜೋಡಿ ತೆರೆಯ ಹಿಂದೆ ನಿಂತು ಕಲ್ಲು ಹೊಡೆಯುವ ಪ್ರಯತ್ನ ಮಾಡುತ್ತಿದ್ದಾರೆ.…
— Karnataka Congress (@INCKarnataka) June 14, 2023
ರಿಟೈರ್ಡ್ ಹರ್ಟ್ ಆಗಿರುವ @CTRavi_BJP ಈಗ ಸ್ವಪಕ್ಷದ ವಿರುದ್ಧವೇ ತಿರುಗಿ ಬಿದ್ದಿದ್ದಾರೆ, ಅವರ ಅರಣ್ಯ ರೋಧನಕ್ಕೆ @mepratap ದನಿ ಜೋಡಿಸಿದ್ದಾರೆ.
ಇಬ್ಬರಿಗೂ ದಮ್ಮು ತಾಕತ್ತು ಇದ್ದರೆ ಅಡ್ಜಸ್ಟಮೆಂಟ್ ಮಾಡಿಕೊಂಡ ತಮ್ಮ ಪಕ್ಷದ ನಾಯಕರ ಹೆಸರು ಹೇಳಿ ಆರೋಪಿಸಲಿ.
ಅಂದಹಾಗೆ ಬಿಜೆಪಿಯೊಂದಿಗೆ ಅಡ್ಜಸ್ಟ್ ಮಾಡಿಕೊಂಡಿದ್ದ ಕುಮಾರಸ್ವಾಮಿ ತಲೆ…
— Karnataka Congress (@INCKarnataka) June 14, 2023