
ಈ ಬಗ್ಗೆ ಟ್ವೀಟ್ ಮಾಡಿದ ಕಾಂಗ್ರೆಸ್ ರಾಜ್ಯ ಬಿಜೆಪಿಯ ‘ದಂಡ’ನಾಯಕರು, ಚಕ್ರವರ್ತಿಗಳು, ಸಾಮ್ರಾಟರೆಲ್ಲಾ ಬೀದಿ ಪಾಲಾಗಿದ್ದಾರೆ! ಬಿಜೆಪಿಯ ಹೈಕಮಾಂಡ್ ಹಾಗೂ ಮೋದಿ ಹೀನಾಯ ಸೋಲಿನ ಬಳಿಕ ರಾಜ್ಯದ ನಾಯಕರನ್ನು ಹತ್ತಿರಕ್ಕೂ ಸೇರಿಸದೇ ಬೀದಿ ಪಾಲು ಮಾಡಿದ್ದಾರೆ ಎಂಬುದಕ್ಕೆ ಈ ಚಿತ್ರಗಳೇ ಸಾಕ್ಷಿ! ಛೇ, ಮಿನಿಮಮ್ ಮರ್ಯಾದೆಯೂ ಇಲ್ಲದಾಯಿತೇ? ಎಂದು ಕಾಂಗ್ರೆಸ್ ಟ್ವೀಟ್ ನಲ್ಲಿ ಬಿಜೆಪಿ ಕಾಲೆಳೆದಿದೆ.
ಪ್ರಧಾನಿ ಮೋದಿ ಆಗಮನದ ವೇಳೆ ಬ್ಯಾರಿಕೇಡ್ ಹಿಂದೆ ಬಿಜೆಪಿ ನಾಯಕರು ನಿಂತಿದ್ದರು. ಈ ಫೋಟೋವನ್ನು ಕಾಂಗ್ರೆಸ್ ಟ್ವೀಟ್ ನಲ್ಲಿ ಹಂಚಿಕೊಂಡು ವ್ಯಂಗ್ಯವಾಡಿದೆ.
'@BJP4Karnataka ನಾಯಕರದ್ದು ಎಂತಹಾ ದುಸ್ಥಿತಿ..
ರಾಜ್ಯ ಬಿಜೆಪಿಯ 'ದಂಡ'ನಾಯಕರು, ಚಕ್ರವರ್ತಿಗಳು, ಸಾಮ್ರಾಟರೆಲ್ಲಾ ಬೀದಿ ಪಾಲಾಗಿದ್ದಾರೆ!
ಬಿಜೆಪಿಯ ಹೈಕಮಾಂಡ್ ಹಾಗೂ ಮೋದಿ ಹೀನಾಯ ಸೋಲಿನ ಬಳಿಕ ರಾಜ್ಯದ ನಾಯಕರನ್ನು ಹತ್ತಿರಕ್ಕೂ ಸೇರಿಸದೇ ಬೀದಿ ಪಾಲು ಮಾಡಿದ್ದಾರೆ ಎಂಬುದಕ್ಕೆ ಈ ಚಿತ್ರಗಳೇ ಸಾಕ್ಷಿ!
ಛೇ, ಮಿನಿಮಮ್ ಮರ್ಯಾದೆಯೂ… pic.twitter.com/QOZ3k8ZiXQ
— Karnataka Congress (@INCKarnataka) August 26, 2023

