ಕೌಟಿಲ್ಯನೂ ಬೆಚ್ಚಿಬೀಳುವ ಆಡಳಿತ, ರಾಜನೀತಿ: ಲುಲುಕುಮಾರನನ್ನೇ ವಿತ್ತಮಂತ್ರಿ ಮಾಡಬಹುದಿತ್ತಲ್ಲ…!: ಕಾಂಗ್ರೆಸ್ ವಿರುದ್ಧ ಜೆಡಿಎಸ್ ಸರಣಿ ಟ್ವೀಟ್ ವಾರ್

ಸತ್ಯಕ್ಕೆ ಸಮಾಧಿ ಕಟ್ಟುವುದು ಕಾಂಗ್ರೆಸ್ ಚಾಳಿ, ಅದು ಮೂಲತಃ ಸುಳ್ಳುಗಳ ವಾಚಾಳಿ. ಮುಖದ ಮೇಲೆ ಕೊಚ್ಚೆ ಹಾಕಿಕೊಂಡವನು ಆ ಗಲೀಜು ಅನ್ಯರ ಕಣ್ಣಿಗೆ ಬೀಳದಿರಲೆಂದು ಇನ್ನೊಬ್ಬರ ಮೇಲೆ ಅದನ್ನೇ ಎರಚಿ ಕುಣಿದನಂತೆ! ಹಂಗಿದೆ ನೋಡಿ ʼಕಮೀಷನ್ ಕಾಂಗ್ರೆಸ್ʼನ ‘ ಹೊಸ ವರಸೆ ಮತ್ತು ಹೊಸ ಕಸವರಿಕೆ ಎಂದು ಜೆಡಿಎಸ್ ಟ್ವೀಟ್ ಮಾಡಿ ಕಾಂಗ್ರೆಸ್ ಗೆ ತಿರುಗೇಟು ನೀಡಿದೆ.

ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು YST Tax ಬಗ್ಗೆ ಹೇಳಿ, ʼಕಾಸಿಗಾಗಿ ಹುದ್ದೆʼ  ದಂಧೆಯನ್ನು ದಾಖಲೆ ಸಮೇತ ಬಿಚ್ಚಿಟ್ಟರೂ ಆ ಅಸಹ್ಯ ತನ್ನದಲ್ಲ ಎನ್ನುವ ‘ ಅವಿವೇಕ ‘ ಕಾಂಗ್ರೆಸ್ ಪಕ್ಷದ್ದಾಗಿದೆ. ಆ ಅವಿವೇಕವನ್ನು ಮುಚ್ಚಿಕೊಳ್ಳಲು  ಈಗ ವೆಸ್ಟ್ʼಎಂಡ್ ಎನ್ನುವ ಸವಕಲು ವಿಷಯ ನೆನಪು ಮಾಡಿಕೊಂಡಿದೆ ಎಂದು ಟೀಕಿಸಲಾಗಿದೆ.

ವೆಸ್ಟ್‌ ಎಂಡ್‌ ಬಾಡಿಗೆ ಮಾತಿರಲಿ, ಲುಲು ಮಾಲು ವಿಷಯಕ್ಕೆ ಬರೋಣ. ಹೊಲ ಉತ್ತಿ, ಬೀಜ ಬಿತ್ತಿ ಬೆವರಿನ ಹೊಳೆ ಹರಿಸಿ ತೆಗೆದ ಫಸಲಿಗೆ ಲುಲು ಮಾಡಬಹುದಾ!? ಒಂದು ವೇಳೆ ಮಾಡಬಹುದಾದರೆ, ನಿಮ್ಮ ʼಲುಲುಕುಮಾರ್ʼಗಿಂತ ಬೆಸ್ಟ್‌ ಎಕನಾಮಿಸ್ಟ್‌ ಇನ್ನೊಬ್ಬರಿಲ್ಲ!! ಹಾಗಿದ್ದರೆ, ಅವರನ್ನೇ ವಿತ್ತಮಂತ್ರಿ ಮಾಡಬಹುದಿತ್ತಲ್ಲ ಎಂದು ಹೇಳಲಾಗಿದೆ.

ವೆಸ್ಟ್‌ ಎಂಡ್‌ ಲೆಕ್ಕ ಇರಲಿ, ‘ಸಿಎಂ ಟಿಪ್ಪಣಿ ಬಿಕರಿ’ಗೆ ಲೆಕ್ಕ ಇಡಿ. ಒಂದು ಎಸಿ ಹುದ್ದೆ, 3 ಟಿಪ್ಪಣಿ. ಇದ್ಯಾವ ಸೀಮೆ ಅರ್ಥಶಾಸ್ತ್ರ? ಕೌಟಿಲ್ಯನೂ ಬೆಚ್ಚಿಬೀಳುವ ಆಡಳಿತ ಹಾಗೂ ರಾಜನೀತಿ. ಈ ಟಿಪ್ಪಣಿಗಳ ಹಣ ಪಕ್ಷದ ಮಂಡಿಗೋ ಅಥವಾ YST Tax ಹುಂಡಿಗೋ? ಇಲ್ಲೇ ಸಾಕ್ಷ್ಯ ಇದೆ. ಪಾಪ, ಬೂಟಾಟಿಕೆ ದಾಸಯ್ಯನಿಗೆ ಮೈಯ್ಯೆಲ್ಲಾ ಪಂಗನಾಮ ಎಂದು ಜೆಡಿಎಸ್ ಟ್ವೀಟ್ ಮಾಡಿ ಕಾಲೆಳೆದಿದೆ.

https://twitter.com/JanataDal_S/status/1676389407228837888

https://twitter.com/JanataDal_S/status/1676389415676178432

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read