HomeIndiaBIG NEWS: ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಜಾತಿ ಗಣತಿ: ರಾಹುಲ್ ಗಾಂಧಿ ಘೋಷಣೆ

BIG NEWS: ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಜಾತಿ ಗಣತಿ: ರಾಹುಲ್ ಗಾಂಧಿ ಘೋಷಣೆ

ನಾಗಪುರ: 2024ರ ಲೋಕಸಭೆ ಚುನಾವಣೆ ಬಳಿಕ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಜಾತಿ ಗಣತಿ ನಡೆಸಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಕಾಂಗ್ರೆಸ್ ನ 139ನೇ ಸಂಸ್ಥಾಪನಾ ದಿನದ ಅಂಗವಾಗಿ ಮಹಾರಾಷ್ಟ್ರದ ನಾಗ್ಪುರದಲ್ಲಿ ಗುರುವಾರ ನಡೆದ ಪಕ್ಷದ ‘ಹೈಂ ತೈಯಾರ್ ಹಮ್’ ರ್ಯಾಲಿಯಲ್ಲಿ ಅವರು ಮಾತನಾಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ದೇಶದಲ್ಲಿ ನಿರುದ್ಯೋಗ ಕಳೆದ 40 ವರ್ಷಗಳಲ್ಲೇ ಗರಿಷ್ಠ ಮಟ್ಟ ತಲುಪಿದೆ. ದೇಶದಲ್ಲಿ ಎರಡು ಸಿದ್ಧಾಂತಗಳ ನಡುವೆ ಸಮರ ನಡೆಯುತ್ತಿದ್ದು, ಮುಂಬರುವ ಸಾರ್ವತ್ರಿಕ ಚುನಾವಣೆ ಎರಡು ಸಿದ್ಧಾಂತಗಳ ಸಮರವಾಗಲಿದೆ. ಎನ್‌ಡಿಎ ಮತ್ತು ಐಎನ್‌ಡಿಐಎ ಬ್ಲಾಕ್‌ನಲ್ಲಿ ಹಲವಾರು ಪಕ್ಷಗಳಿವೆ, ಆದರೆ, ಯುದ್ಧವು ಎರಡು ಸಿದ್ಧಾಂತಗಳ ನಡುವೆ ನಡೆಯಲಿದೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular