HomeKarnatakaಬಾಗಲಕೋಟೆ, ದಾವಣಗೆರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆ ಭರ್ಜರಿ ಜಯ ; ಸಿಎಂ ಸಿದ್ದರಾಮಯ್ಯ ಅಭಿನಂದನೆ

ಬಾಗಲಕೋಟೆ, ದಾವಣಗೆರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆ ಭರ್ಜರಿ ಜಯ ; ಸಿಎಂ ಸಿದ್ದರಾಮಯ್ಯ ಅಭಿನಂದನೆ

ಬೆಂಗಳೂರು : ರಾಜ್ಯದ ತೀವ್ರ ಕುತೂಹಲ ಕೆರಳಿಸಿದ್ದ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷವು ಭರ್ಜರಿ ಜಯಭೇರಿ ಬಾರಿಸಿದೆ. ಪ್ರತಿಪಕ್ಷಗಳ ತೀವ್ರ ಪೈಪೋಟಿ, ಅಪಪ್ರಚಾರ ಹಾಗೂ ಹಣದ ಪ್ರಭಾವದ ನಡುವೆಯೂ ಮತದಾರರು ಕಾಂಗ್ರೆಸ್ ಸರ್ಕಾರದ ಸಾಧನೆಗಳು ಮತ್ತು ಪಕ್ಷದ ಸಿದ್ಧಾಂತದ ಮೇಲೆ ಮತ್ತೊಮ್ಮೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಅಭಿನಂದನೆ

ಮೊತ್ತ ಮೊದಲಿಗೆ ಬಾಗಲಕೋಟೆ ಮತ್ತು ದಾವಣಗೆರೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಮತದಾನ ಮಾಡಿ ಗೆಲ್ಲಿಸಿದ ಸಮಸ್ತ ಮತದಾರ ಬಂಧುಗಳಿಗೆ ತುಂಬು ಹೃದಯದ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಇದು ನಮ್ಮ ಸರ್ಕಾರದ ಸಾಧನೆಗಳಿಗೆ ಮತ್ತು ಕಾಂಗ್ರೆಸ್ ಪಕ್ಷದ ಸಿದ್ಧಾಂತಕ್ಕೆ ಸಿಕ್ಕ ಜಯವಾಗಿದೆ. ವಿರೋಧಪಕ್ಷಗಳ ಅಪಪ್ರಚಾರ ಮತ್ತು ಹಣದ ಪ್ರಭಾವದ ಹೊರತಾಗಿಯೂ ಎರಡೂ ಕ್ಷೇತ್ರಗಳ ಮತದಾರರು ಕಾಂಗ್ರೆಸ್ ಪಕ್ಷ ಮತ್ತು ನಮ್ಮ ಸರ್ಕಾರದ ಮೇಲೆ ನಂಬಿಕೆ ಇಟ್ಟು ಮತಚಲಾಯಿಸಿದ್ದಾರೆ. ಈ ಎರಡೂ ಕ್ಷೇತ್ರಗಳ ಮತದಾರರಷ್ಟೇ ಅಲ್ಲ ಇಡೀ ರಾಜ್ಯದ ಜನತೆ ನಮ್ಮ ಮೇಲೆ ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳುತ್ತೇವೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿಯೂ ರಾಜ್ಯದ ಮತದಾರರು ಇದೇ ರೀತಿ ನಮ್ಮನ್ನು ಹರಸುತ್ತಾರೆ ಎಂಬ ನಂಬಿಕೆ ನಮಗೆ ಇದೆ  ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular