HomeKarnatakaBIG NEWS: ಸುದ್ದಿಗೋಷ್ಠಿ ವೇಳೆಯೇ ಹೃದಯಾಘಾತದಿಂದ ಸಾವನ್ನಪ್ಪಿದ ಕಾಂಗ್ರೆಸ್ ಕಾರ್ಯಕರ್ತ

BIG NEWS: ಸುದ್ದಿಗೋಷ್ಠಿ ವೇಳೆಯೇ ಹೃದಯಾಘಾತದಿಂದ ಸಾವನ್ನಪ್ಪಿದ ಕಾಂಗ್ರೆಸ್ ಕಾರ್ಯಕರ್ತ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಸುದ್ದಿಗೋಷ್ಠಿ ನಡೆಸುತ್ತಿದ್ದ ವೇಳೆ ಕಾಂಗ್ರೆಸ್ ಕಾರ್ಯಕರ್ತ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಸಿ.ಕೆ.ರವಿಚಂದ್ರನ್ ಹೃದಯಾಘಾತದಿಂದ ಸಾವನ್ನಪ್ಪಿದ ಕಾಂಗ್ರೆಸ್ ಕಾರ್ಯಕರ್ತ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಸಂಘದಿಂದ ರಾಜ್ಯಪಾಲರ ನಡೆ ವಿರುದ್ಧ ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿ ನಡೆಸಲಾಗುತ್ತಿತ್ತು. ಈ ವೇಳೆ ಏಕಾಏಕಿ ಕುಸಿದು ಬಿದ್ದ ಸಿ.ಕೆ.ರವಿಚಂದ್ರನ್, ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ತಕ್ಷಣ ಅವರನ್ನು ಪೋರ್ಟೀಸ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಷ್ಟರಲ್ಲೇ ಅವರು ಕೊನೆಯುಸಿರೆಳೆದಿದ್ದರು ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular